ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹಾರ, ಪೇಟ ಹೂಗುಚ್ಛ ಶಾಲು, ನೀಡುವ ಬದಲು ಕನ್ನಡ ಪುಸ್ತಕ ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಅದರ ಬದಲು ಕನ್ನಡ ಪುಸ್ತಕ ನೀಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..