ಚಿಕ್ಕಬಳ್ಳಾಪುರ: ಕಳೆದ ಜುಲೈ 19 ಮತ್ತು 22 ರಂದು ನಡೆದ 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕಗಳನ್ನು ಪಡೆದ ರಾಜ್ಯದ 157 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿದ್ದು, ಈ ಅತ್ಯುನ್ನತ ಶ್ರೇಯಾಂಕ ಗಳಿಸಿದ ಜಿಲ್ಲೆಯ 30 ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಯನ್ನು ಶ್ಲಾಘಿಸಿ ಜಿಲ್ಲಾಧಿಕಾರಿ ಆರ್.ಲತಾ ಅವರು ಅಭಿನಂದನೆ ತಿಳಿಸಿದ್ದಾರೆ.
2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿ ಮೊಟ್ಟ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೆಟ್ಟಿಗೆ ಐತಿಹಾಸಿಕ ದಾಖಲೆಯಾಗಿತ್ತು. ಈ ಬಾರಿ ಕೋವಿಡ್ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ ವಿದ್ಯಾರ್ಥಿಗಳು ಉತ್ತೀಣರಾಗಿದ್ದಾರೆ.
ಜಿಲ್ಲೆಯಲ್ಲಿ 15,848 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತೀರ್ಣರಾದವರ ಪೈಕಿ 625 ಕ್ಕೆ 625 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಯಾಂಕ ಗಳಿಸಿದ 157 ವಿದ್ಯಾರ್ಥಿಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 30 ವಿದ್ಯಾರ್ಥಿಗಳು ಅತಿ ಹೆಚ್ಚು ಸ್ಥಾನ ಕಾಯ್ದುಕೊಂಡಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಶೇ.19.10 ರಷ್ಟು ವಿದ್ಯಾರ್ಥಿಗಳು ನಮ್ಮ ಜಿಲ್ಲೆಯವರೇ ಆಗಿರುವುದು ಹೆಚ್ಚಿನ ಸಂತಸ ತಂದಿದೆ.
ಕಳೆದ ಎರಡು ವರ್ಷಗಳಿಂದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಮಹತ್ತರ ಬದಲಾವಣೆಯಾಗಿರುವುದಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಜಿಲ್ಲೆಯ ಸಮಸ್ತ ಜನತೆಗೆ, ಜನಪ್ರತಿನಿದಿನಗಳಿಗೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ತಿಳಿಸಿದರು.
ಉತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುವತ್ತ ಗಮನ ಹರಿಸಿ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದು ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಶುಭ ಹಾರೈಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..