ದೊಡ್ಡಬಳ್ಳಾಪುರ: ತಾಲೂಕಿನ ಮೆಳೇಕೋಟೆ ಕ್ರಾಸಿನ ಎಸ್.ಜೆ.ಸಿ.ಆರ್.ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
2020-21ನೇ ಸಾಲಿನ 59 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದು ಶಾಲೆಗೆ ಶೇ.100 ಫಲಿತಾಂಶ ದೊರೆತಿದೆ.
ಅಲ್ಲದೆ ವಿದ್ಯಾರ್ಥಿಗಳಾದ ಯಶಸ್ವಿನಿ.ಆರ್.ಎಸ್ ಮತ್ತು ಲಿಖಿತ್.ಆರ್.ವಿ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದಿದ್ದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಉಳಿದಂತೆ 623 ಅಂಕಗಳನ್ನು 10 ವಿದ್ಯಾರ್ಥಿಗಳು ಪಡೆದು ದ್ವಿತೀಯ ಸ್ಥಾನ ಪಡೆದರೆ, 45 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯನ್ನು ಮತ್ತು ಇಬ್ಬರು ವಿದ್ಯಾರ್ಥಿಗಳು ಉತ್ತಮ ಶ್ರೇಣಿಯನ್ನು ಪಡೆದಿದ್ದಾರೆಂದು ಮುಖ್ಯಶಿಕ್ಷಕರಾದ ಹೆಚ್.ಎಲ್.ವಿಜಯಕುಮಾರ್ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿರವರು, ಚಿಕ್ಕಬಳ್ಳಾಪುರ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು ಆಶೀರ್ವದಿಸಿದ್ದಾರೆ ಹಾಗೂ ಆಡಳಿತಾಧಿಕಾರಿಗಳಾದ ಡಾ.ಎನ್.ಶಿವರಾಮರೆಡ್ಡಿ, ಮುಖ್ಯಶಿಕ್ಷಕ ವಿಜಯಕುಮಾರ್.ಹೆಚ್.ಎಲ್, ಶಾಲಾ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..