ಕರ್ನಾಟಕ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

ನವದೆಹಲಿ/ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ಶುಭಕೋರಿ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಭೇಟಿ ವೇಳೆ ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ, ಖಾರಿಫ್‌ನಲ್ಲಿ  ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.

ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ  0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ 07 ನೇ ಆಗಸ್ಟ್, 2021 ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು  ಕೇಂದ್ರದ ಉಭಯ ಸಚಿವರಲ್ಲಿ ಬಿ.ಸಿ.ಪಾಟೀಲರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ)ವೆಂಟಕರಮಣರೆಡ್ಡಿ ಜೊತೆಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!