ಮೈಸೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ನಂತರ ಶ್ರೀ ಆದಿ ಜಗದ್ಗುರುಗಳ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿದರು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವ ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಮುನಿರತ್ನ, ಶಾಸಕರಾದ ಜಿ.ಟಿ.ದೇವೇಗೌಡ, ರೇಣುಕಾಚಾರ್ಯ, ಕೆ. ಮಹದೇವ್, ಡಾ. ಯತೀಂದ್ರ ಸಿದ್ದರಾಮಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಜೆ.ಎಲ್.ಆರ್. ಅಧ್ಯಕ್ಷ ಅಪ್ಪಣ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳು ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..