ದೊಡ್ಡಬಳ್ಳಾಪುರ: ಸೋಮವಾರ ಪ್ರಕಟವಾದ ರಾಜ್ಯ ಪಠ್ಯಕ್ರಮದ 10ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಉತ್ತಮ ಅಂಕಗಳಿಕೆ ಮಾಡಿದ್ದಾರೆ.
ಪರೀಕ್ಷೆ ಬರೆದ 263 ವಿದ್ಯಾರ್ಥಿಗಳಲ್ಲಿ 09 ಮಂದಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 179 ಪ್ರಥಮ ದರ್ಜೆ, 57 ದ್ವಿತಿಯ ದರ್ಜೆ ಹಾಗೂ 18 ಮಂದಿ ತೆರ್ಗೆಡೆಹೊಂದಿ ಶೇ.100ರಷ್ಟು ಫಲಿತಾಂಶ ದೊರೆತಿದೆ.
ಅಲ್ಲದೆ ಶಾಲೆಯ ವಿದ್ಯಾರ್ಥಿನಿ ಪ್ರತಿಭ.ವಿ 621 (99.36%) ಅಂಕ ಪಡೆದು ಶಾಲೆಗೆ ಅತಿ ಹೆಚ್ಚು ಅಂಕ ಪಡೆದವರಾಗಿದ್ದಾರೆ.
ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನ ಉಪಪ್ರಾಂಶುಪಾಲರು, ಶಾಲೆಯ ಶಿಕ್ಷಕ ವೃಂದ, ಎಸ್ ಡಿಎಂಸಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..