ರಾಜ್ಯದಲ್ಲಿ ಲಾಕ್‍ಡೌನ್ ಮಾಡಬೇಕಾದ ಪರಿಸ್ಥಿತಿ ಆಗದಂತೆ ತಡೆಯುವ ಪ್ರಯತ್ನ ನನ್ನದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ಕೋವಿಡ್ 3ನೇ ಅಲೆಯನ್ನು ತಡೆಯಲು ನಮ್ಮ ಗಮನ ಕೇಂದ್ರೀಕರಿಸಿದ್ದೇವೆ. ಮುಂಜಾಗೃತವಾಗಿ ಸೂಕ್ತ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡರೆ ಕೋವಿಡ್ 3ನೇ ಅಲೆಯನ್ನು ತಡೆಯಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.

ಮೈಸೂರಿನ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತ ಪರಿಶೀಲನಾ ಸಭೆ ನಡೆಸಿದ ಅವರು 1ನೇ ಮತ್ತು 2ನೇ ಅಲೆಯು ಮೊದಲು ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿ, ನಂತರ ನಮ್ಮ ರಾಜ್ಯದಲ್ಲಿ ಹರಡಿದೆ. ಈ ಹಿನ್ನೆಲೆಯಲ್ಲಿ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಈ ಎರಡು ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.

ಈ ರಾಜ್ಯಗಳ ಗಡಿಯಿಂದ ಕೋವಿಡ್ ನೆಗಿಟಿವ್ ವರದಿ ಇಲ್ಲದೆ ಪ್ರಯಾಣಿಕರು ಬರುವಂತಿಲ್ಲ. ಇದರಲ್ಲಿ ಲೋಪವಾಗದಂತೆ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಗಡಿಯಲ್ಲಿ ಅಧಿಕಾರಿಗಳು 3 ಪಾಳಿಯಲ್ಲಿ ಕೆಲಸ ಮಾಡಲು ನಿಯೋಜಿಸಲಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಆಗಾಗ್ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಸೂಚಿಸಲಾಗಿದೆ ಎಂದರು.

ಗಡಿಯಲ್ಲಿ ಚೆಕ್‍ಪೋಸ್ಟ್ ಹೊರತುಪಡಿಸಿಯೂ ಹಲವಾರು ದಾರಿಗಳು ಇರುತ್ತವೆ. ಅಲ್ಲೆಲ್ಲ ಪೆÇಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಗಡಿ ಭಾಗದ 10 ಕಿ.ಮೀ. ವ್ಯಾಪ್ತಿಯಲ್ಲಿ ಶೇ. 100ರಷ್ಟು ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಸೂಚಿಸಿದ್ದೇನೆ ಎಂದರು.

3ನೇ ಅಲೆ ಎದುರಿಸಲು ಐ.ಸಿ.ಯು. ಬೆಡ್ ಹೆಚ್ಚಳ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಆಮ್ಲಜನಕಯುಕ್ತ ಹಾಸಿಗೆಗಳ ಸೌಲಭ್ಯ, ಮಕ್ಕಳ ತಜ್ಞರ ನಿಯೋಜನೆ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ನೀಡಿದ ಸಲಹೆಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ 14 ಆಕ್ಸಿಜನ್ ಜನರೇಟರ್ ಸ್ಥಾಪಿಸಲು ಮಂಜೂರಾಗಿದೆ. ಈ ಪೈಕಿ ಈಗಾಗಲೇ 3 ಪ್ಲಾಂಟ್‍ಗಳು ಆಗಿವೆ. ಇನ್ನು 6 ಆಕ್ಸಿಜನ್ ಜನರೇಟರ್ ಸ್ಥಾಪನೆ ಪ್ರಗತಿಯಲ್ಲಿದೆ. ಉಳಿದ 5 ಜನರೇಟರ್ ಬರಬೇಕಾಗಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು ಎಂದರು.

ಪ್ರತಿ ಹಳ್ಳಿಯಲ್ಲೂ ಮಕ್ಕಳ ಆರೋಗ್ಯ ಸ್ಥಿತಿಗತಿಯನ್ನು ಅರಿಯಲು ಆರೋಗ್ಯ ಶಿಬಿರ ಮಾಡಬೇಕು. ಅಪೌಷ್ಠಿಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕ ಆಹಾರ ನೀಡಬೇಕು. ಆರೋಗ್ಯ ಇಲಾಖೆಯಿಂದ ಪೋಷಕಾಂಶ ಔಷಧಿಗಳನ್ನು ನೀಡಬೇಕು ಎಂದರು.

ಪ್ರಸ್ತುತ 60-65 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುತ್ತಿದೆ. ಈ ಪ್ರಮಾಣವನ್ನು 1.5 ಕೋಟಿಗೆ ಹೆಚ್ಚಿಸುವಂತೆ ಕೇಳುತ್ತಿದ್ದೇವೆ. ಅದು ಬಂದರೆ ಬಹುತೇಕ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದರು.

ಮೈಸೂರಿನಿಂದ ಬೆಂಗಳೂರಿಗೆ ಹೋಗಿ ಬರುವವರ ಸಂಖ್ಯೆ ತುಂಬಾ ಹೆಚ್ಚಿದೆ. ಗಡಿ ಜಿಲ್ಲೆಯಾಗಿರುವ ಇಲ್ಲಿ ನಿಯಂತ್ರಣ ಸಾಧ್ಯವಾದರೆ ರಾಜ್ಯದಲ್ಲಿ ನಿಯಂತ್ರಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ ಎಂದರು.

ರಾಜ್ಯದಲ್ಲಿ ಲಾಕ್‍ಡೌನ್ ಮಾಡಬೇಕಾದ ಪರಿಸ್ಥಿತಿ ಆಗದಂತೆ ತಡೆಯುವ ಪ್ರಯತ್ನ ನನ್ನದು. ಸೂಕ್ತ ಮುಂಜಾಗೃತ ಕ್ರಮಗಳನ್ನು ಈಗಿನಿಂದಲೇ ತೆಗೆದುಕೊಂಡರೆ ಇದು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಸಾ.ರಾ.ಮಹೇಶ್, ಮರಿತಿಬ್ಬೇಗೌಡ, ಸಂದೇಶ್ ನಾಗರಾಜು, ಎಲ್. ನಾಗೇಂದ್ರ, ಹೆಚ್.ಪಿ.ಮಂಜುನಾಥ್, ಡಾ. ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ಕೆ. ಮಹದೇವ, ಕೆ.ಟಿ.ಶ್ರೀಕಂಠೇಗೌಡ, ಎಂ.ಅಶ್ವಿನ್ ಕುಮಾರ್, ಉಪ ಮೇಯರ್ ಅನ್ವರ್ ಬೇಗ್, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪಂಚಾಯಿತಿ ಸಿ.ಇ.ಓ ಎ.ಎಂ. ಯೋಗೀಶ್, ಎಸ್‍ಪಿ ಆರ್. ಚೇತನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!