ಬೆಂಗಳೂರು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ, ಮ್ಯಾನುವೆಲ್ ಸ್ಕ್ಯಾವೆಂಜರ್ ಹಾಗೂ ಅವರ ಅವಲಂಬಿತರಿಂದ ಆನ್‍ಲೈನ್ ಹಾಗೂ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಯಂ ಉದ್ಯಮಶೀಲತಾ (ಐ.ಎಸ್.ಬಿ.) ಯೋಜನೆ, ಐರಾವತ ಪ್ರವಾಸಿ ಟ್ಯಾಕ್ಸಿ ಮತ್ತು ಸರಕು ಸಾಗಾಣಿಕೆ ವಾಹನ ಯೋಜನೆ, ಪ್ರೇರಣೆ ಯೋಜನೆ ಮತ್ತು ಮೈಕ್ರೋ ಕ್ರೆಡಿಟ್ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ 2021ರ ಸೆಪ್ಟೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತು, ನಿಗಮದ ಯೋಜನೆಗಳ ವಿವರಗಳನ್ನು ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಲು ಕೋರಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..