ಬೆಂ.ಗ್ರಾ.ಜಿಲ್ಲೆ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈಲ್ಡ್ ಕಾಟ್ಸ್ ಅಡ್ವೇಂಚರ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಟ್ರೆಕ್ಕಿಂಗ್, ಯೋಗ, ಧ್ಯಾನ ಮತ್ತು ಪರಿಸರ ಅಧ್ಯಯನ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ದುರ್ಗ ಬೆಟ್ಟದಲ್ಲಿಂದು ಶಾಸಕ ಟಿ. ವೆಂಕಟರಮಣಯ್ಯ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಕಂಟನಕುಂಟೆ ಕೃಷ್ಣಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ತಾಲ್ಲೂಕು ಆರೋಗ್ಯ ಅಧಿಕಾರಿ ಪರಮೇಶ್ವರ್, ವಲಯ ಅರಣ್ಯಧಿಕಾರಿ ಮುನಿರಾಜು, ವೈಲ್ಡ್ ಕಾಟ್ಸ್ ಅಡ್ವೆಂಚರ್ ಅಸೋಸಿಯೇಷನ್ ನ ಅಭಿಷೇಕ್ ಮತ್ತು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುನಿಲ್ ನಾಯಕ್ ಅವರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..