ಬೆಂ.ಗ್ರಾ.ಜಿಲ್ಲೆ: ಡೇ-ಎನ್.ಆರ್.ಎಲ್.ಎಂ (ಸಂಜೀವಿನಿ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಗುಂಪಿನ ಸದಸ್ಯರುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 12ರಂದು 12.30 ಗಂಟೆಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಲಿದ್ದಾರೆ.
ಸಂವಾದ ಕಾರ್ಯಕ್ರಮವು ದೂರದರ್ಶನದ ಮೂಲಕ ಹಾಗಯ ಎನ್.ಐ.ಸಿ/ ಸಿ.ಎಸ್.ಸಿ ಹಾಗೂ ಯೂಟ್ಯೂಬ್‌ನ ಮುಖಾಂತರ ನೇರ ಪ್ರಸಾರವಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..