ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ 2021-22ನೇ ಸಾಲಿನ ಜೂನ್-2021ರ ಮಾಹೆಯ ಅಂತ್ಯದವರೆಗಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಆಗಸ್ಟ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅಧ್ಯಕ್ಷತೆವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೋನ ವಂಶಿಕೃಷ್ಣ ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..