ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿ ವೃತ್ತದಿಂದ ಬಸವ ಭವನ ವೃತ್ತದವರೆಗಿನ ರಸ್ತೆಗಳ ಅಗಲೀಕರಣ,ಹಳೆಯ ಮರಗಳನ್ನು ತೆರವು ಮಾಡುವುದು ಅನಿವಾರ್ಯವಾಗಿತ್ತು. ಈ ನಿಟ್ಟಿನಲ್ಲಿ ಈಗ ರಸ್ತೆಯ ಎರಡೂ ಬದಿಯಲ್ಲಿ ಗಿಡಗಳನ್ನು ನೆಡಲಾಗುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ಲೋಕೋಪಯೋಗಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಾಹನಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಮುಕ್ತಾಯವಾಗಿರುವ ಈ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ನೀಡುವ ಹಾಗೂ ನೆರಳು ನೀಡಲು ಅನುಕೂಲವಾಗುವಂತಹ ವಿವಿಧ ಜಾತಿಯ ಸಸಿಗಳನ್ನು ನೆಡಲು ಪ್ರಥಮ ಆದ್ಯತೆ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಸ್ತುತ ಮಾವು, ಹತ್ತಿ, ನೇರಳೆ ಮೊದಲಾದ ವಿವಿಧ ಜಾತಿಯ 35 ಗಿಡಗಳನ್ನು ನೆಡಲಾಗುತ್ತಿದೆ. ನಗರಸಭೆ ವತಿಯಿಂದ ಸಸಿಗಳಿಗೆ ಟ್ರೀ ವಾರ್ಡ್ ಗಳ ಅಳವಡಿಕೆ, ಬೇಸಿಗೆಯಲ್ಲಿ ನೀರು ಹಾಕುವ ಮೂಲಕ ಪೋಷಣೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಪುಟ್ಟಹನುಮಂತರಾಜು, ವಲಯ ಅರಣ್ಯಾಧಿಕಾರಿ ಮುನಿರಾಜು, ಉಪವಲಯ ಅರಣ್ಯಾಧಿಕಾರಿ ಸೀನಪ್ಪ , ಸಿಬ್ಬಂದಿಗಳಾದ ಹನುಮಂತಪ್ಪ, ಸುಚೇತನ ಸಂಸ್ಥೆಯ ಮಂಜುನಾಥ್,ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಮುಖಂಡರಾದ ಸೋಮರುದ್ರಶರ್ಮ, ಆಂಜನಮೂರ್ತಿ, ಶ್ರೀನಗರ ಬಶೀರ್, ಪು.ಮಹೇಶ್, ಮುನಿರಾಜು, ವಿನೋದ್ ಕುಮಾರ್ ಗೌಡ ಮತ್ತಿತರರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..