ದೊಡ್ಡಬಳ್ಳಾಪುರ: ಶ್ರಾವಣ ಆರಂಭದ ಮೊದಲ ಹಬ್ಬವಾದ ನಾಗರಪಂಚಮಿ ಹಿಂದೂಗಳಿಗೆ ವಿಶೇಷ ಹಬ್ಬವಾಗಿದ್ದು, ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಬಾರಿ ನಾಗರಪಂಚಮಿ ನೀರಸವೆನಿಸಿತ್ತು.
ನಾಗರಪಂಚಮಿ ದಿನ ಸಾವಿರಾರು ಭಕ್ತಾಧಿಗಳು ಇಲ್ಲಿಗೆ ಆಗಮಿಸಿ ನಾಗರ ಕಲ್ಲುಗಳಿಗೆ ಹಾರೆಲೆದು ಪೂಜೆ ಸಲ್ಲಿಸುತ್ತಾರೆ. ಆದರೆ ಕೋವಿಡ್ ಮೂರನೇ ಅಲೆ ತಡೆಗಟ್ಟಲು ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ವಿಷಯ ವ್ಯಾಪಕವಾಗಿ ಹರಡಿದ ಕಾರಣ ಹೆಚ್ಚಿನ ಜನದಟ್ಟಣೆ ಕಂಡುಬರಲಿಲ್ಲ.
ಆದರೆ ಇಂದು ಬೆಳಗ್ಗೆ 8.10ರ ಸುಮಾರಿಗೆ ಆಡಳಿತ ಮಂಡಳಿ ದೇವಾಲಯಕ್ಕೆ ಭಕ್ತರ ಪ್ರವೇಶದ ನಿರ್ಬಂಧವನ್ನು ಏಕಾಏಕಿ ತೆರವುಗೊಳಿಸಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಕೆಲ ಭಕ್ತರಲ್ಲಿ ಸಂತಸಕ್ಕೆ ಕಾರಣವಾದರೆ, ಮತ್ತೆ ಕೆಲವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯ ಹಿನ್ನೆಲೆಯಲ್ಲಿ ನಿರ್ಬಂಧ ತೆರವುಗೊಳಿಸಿದ್ದಾರೆ. ಕೋವಿಡ್ ನಿಯಮ ಜನಸಾಮಾನ್ಯರಿಗೆ ಒಂದು. ಜನಪ್ರತಿನಿದಿಗಳಿಗೆ ಒಂದು ನಿಯವೆಂಬಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಘಾಟಿ ಸುಬ್ರಮಣ್ಯ ದೇವಸ್ಥಾನದ ಆಡಳಿತ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ನಾಗರ ಪಂಚಮಿ ಹಿನ್ನೆಲೆ ದೇವಸ್ಥಾನದ ಬಾಗಿಲು ಬಂದ್ ಮಾಡಿರುವ ಬಗ್ಗೆ ಭಕ್ತರಿಗೆ ಮಾಹಿತಿ ಸಿಗದ ಹಿನ್ನೆಲೆ ಇಂದು ಕ್ಷೇತ್ರಕ್ಕೆ ಭಕ್ತರು ಆಗಮಿಸಿದರು.
ಜಿಲ್ಲಾಧಿಕಾರಿಗಳಿಂದ ಮೌಖಿಕ ಅನುಮತಿ ಪಡೆದು ಈ ದಿನ ಮಾತ್ರ ಭಕ್ತರಿಗೆ ಅವಕಾಶ ನೀಡಲಾಗಿದೆ. ದೇವಸ್ಥಾನದಲ್ಲಿ ಯಾವುದೇ ಉತ್ಸವ, ಮೆರವಣಿಗೆ ಮತ್ತು ಸೇವಾ ಕಾರ್ಯಗಳು ನಡೆಯುತ್ತಿಲ್ಲವೆಂದು ಸಮಜಾಯಿಷಿ ನೀಡಿದರು.
ನಾಗರಪಂಚಮಿ ಶ್ರಾವಣ ಮಾಸದಲ್ಲಿ ಬರುವ ಘಾಟಿ ಕ್ಷೇತ್ರಕ್ಕೆ ದೊಡ್ಡಮಟ್ಟದ ಸಂಭ್ರಮವನ್ನೇ ತಂದುಕೊಡುತ್ತಿತ್ತು.
ದೊಡ್ಡಬಳ್ಳಾಪುರ ಸೇರಿದಂತೆ ಜಿಲ್ಲೆ, ಸಮೀಪದ ಜಿಲ್ಲೆಗಳ ಭಕ್ತಾಧಿಗಳು ಇಲ್ಲಿನ ಘಾಟಿ ಸುಬ್ರಮಣ್ಯ ಕ್ಷೇತ್ರದ ನಾಗರ ಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುವುದು ಪ್ರತಿ ವರ್ಷದ ಸಂಪ್ರದಾಯವಾಗಿದೆ.
ನಾಗರಪಂಚಮಿ ದಿನ ಇಲ್ಲಿನ ನಾಗರ ಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರೆ ನಾಗರದೋಷ ನಿವಾರಣೆಯಾಗುತ್ತದೆ ಎಂಬುದು ಅನಾದಿ ಕಾಲದಿಂದಲೂ ಪೀಳಿಗೆಯಿಂದ ಪೀಳಿಗೆಗೆ ಹರಿದು ಬರುತ್ತಿರುವ ನಂಬಿಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..