
ಬೆಂ.ಗ್ರಾ.ಜಿಲ್ಲೆ: ಆಗಸ್ಟ್ 16 ರಂದು ನಡೆಯಬೇಕಿದ್ದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 11.00 ಗಂಟೆಗೆ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿತ್ತು.
ಆದರೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..