ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು..?: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ?

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ.ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿ ಭಿನ್ನಾಭಿಪ್ರಾಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ.

ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು.

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.

ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್  ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು.

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ .ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು  ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ.

ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಹೆಚ್ಚರಿಕೆ‌ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!