
ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ,ಶ್ರಾವಣ ಮಾಸದ ವಿಶೇಷ ದಿನಗಳಂದೇ ದೇವಾಲಯ ಪ್ರವೇಶ ನಿಷೇಧ ಹೇರಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮುಜರಾಯಿ ಹಾಗೂ ಖಾಸಗಿ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಶ್ರಾವಣ ಮಾಸದ ಶನಿವಾರ ಮತ್ತು ಭಾನುವಾರ, ಸಾರ್ವತ್ರಿಕ ರಜಾ ಹಾಗೂ ವಿಶೇಷ ದಿನಗಳಂದು ಭಕ್ತಾಧಿಗಳಿಗೆ ದೇವಾಲಯದ ಪ್ರವೇಶವನ್ನು ನಿಷೇಧಿಸಿ,ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ವಿಶೇಷ ದಿನಗಳಂದು ದೇವಾಲಯದಲ್ಲಿ ಜರುಗುವ ಎಲ್ಲಾ ಧಾರ್ಮಿಕ ಕಾರ್ಯಗಳನ್ನು ದೇವಾಲಯದ ಅರ್ಚಕರು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಯಲಿದ್ದು, ಉಳಿದ ದಿನಗಳಂದು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಧಾರ್ಮಿಕ ದತ್ತಿ ಆಯುಕ್ತರ ಮಾರ್ಗಸೂಚಿ ಹಾಗೂ ಆದೇಶಗಳಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ, ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..