ಘಾಟಿ ಗೋ ಶಾಲೆಯಲ್ಲಿ ಬೃಂದಾವನ ಸಸಿ ನೆಡು 4ನೇ ದಿನದ ಸಪ್ತಾಹದಲ್ಲಿ ವಿಆರ್‌ಎಲ್ ಗ್ರೂಪ್ ವಿಜಯಸಂಕೇಶ್ವರ ಭಾಗಿ / ದೇಶಿಯ ಗೋ ಆಧಾರಿತ ಕೃಷಿ ಅಳವಡಿಸಿಕೊಳ್ಳಿ: ವಿಜಯಸಂಕೇಶ್ವರ

ದೊಡ್ಡಬಳ್ಳಾಪುರ: ದೇಶಿಯ ಗೋವು ಆಧಾರಿತ ಕೃಷಿಯನ್ನು ರೈತರು ಅವಳವಡಿಸಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಗುಣ ಮಟ್ಟದ ಆಹಾರ ನೀಡಲು ಸಾಧ್ಯವಾಗುತ್ತದೆ ಎಂದು ವಿಆರ್‌ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಜಯ ಸಂಕೇಶ್ವರ ಹೇಳಿದರು.

ತಾಲೂಕಿನ ಶ್ರೀ ಸುಬ್ರಮಣ್ಯ ಘಾಟಿ ಕ್ಷೇತ್ರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನ ಗೋಶಾಲೆಯಲ್ಲಿ 7 ದಿನಗಳ ಬೃಂದಾವನ ಕೃಷಿ ಅರಣ್ಯ ಯೋಜನೆಯ  ಸಸಿ ನೆಡು ಸಪ್ತಾಹದ 4ನೇ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಗೋವು ಪೂಜೆಗೆ ಅಷ್ಟೆ ಸೀಮಿತವಾಗದೆ, ಗೋವನ್ನು ಕೃಷಿ ಪದ್ದತಿ ಸೇರಿದಂತೆ ವಿವಿಧ ಪ್ರಯೋಜನಗಳ ಆಧ್ಯತೆ ಮೇಲೆ ಅನುಸರಿಸಿದರೆ ಮಾತ್ರ ಅದರ ಉತ್ತಮ ಫಲಿತವನ್ನು ಪಡೆಯಬಹುದಾಗಿದೆ ಎಂದರು. 

ಅಗತ್ಯವಾದ ಆಹಾರ, ಆಮ್ಲಜನಕ ನೀಡುವುದರೊಂದಿಗೆ ವಸತಿ ಸೇರಿದಂತೆ ತನ್ನೆಲ್ಲ ಅಗತ್ಯಗಳಿಗೆ ವೃಕ್ಷಗಳನ್ನೆ ಮನುಷ್ಯ ಅವಲಂಭಿಸಿದ್ದಾನೆ. ಮಣ್ಣಿನ ಸವಕಳಿ, ಬಿಸಿಲಿನ ತಾಪ ಹೀಗೆ ಪರಿಸರವನ್ನು ಸಮತೋಲದಲ್ಲಿ ಇಡುವಲ್ಲಿಯೂ ವೃಕ್ಷದ್ದು ಬಹು ದೊಡ್ಡ ಪಾತ್ರ ಇದೆ. ಹೀಗಾಗಿ ಸ್ವಾತಂತ್ರ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಕ್ಕೆ ದೊಡ್ಡಕೊಡುಗೆ ಕೊಡುವಲ್ಲಿ ಬೃಂದಾವನ ಸಸಿ ನೆಡು 7 ದಿನಗಳ ಸಪ್ತಾಹದಲ್ಲಿ ಪರಿಸರ ತಜ್ಞರ ಸಲಹೆಯಂತೆ ವಿವಿಧ ಜಾತಿಯ 10 ಸಾವಿರ ಸಸಿಗಳನ್ನು ನೆಡುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೋತ್ಥಾನ ಪರಿಷತ್  ದೇಶಕ್ಕೆ ಅಗತ್ಯವಾದದನ್ನು ಕೊಡುವಲ್ಲಿ ಪರಿಷತ್  ಕಾರ್ಯ ಮಾಡುತ್ತಿದೆ ಎಂದು ಶ್ಲಾಘಿಸಿದರು. 

ಕಾರ್ಯಕ್ರಮಕ್ಕೂ ಮುನ್ನ ವಿಜಯ ಸಂಕೇಶ್ವರ ಹಾಗು ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಗೋ ಶಾಲೆಯ ಮೊದಲ ಹಂತದಲ್ಲಿ ನಿರ್ಮಾಣವಾಗಿರುವ ಬೃಂದಾವನ ಅರಣ್ಯ, ಸೇರಿದಂತೆ ಇಲ್ಲಿನ ಮುಂದಿನ ಅಭಿವೃದ್ಧಿ ಯೋಜನೆಗಳ ಕುರಿತು ಪರಿಚಯ ಮಾಡಿಕೊಂಡು, ಅಗತ್ಯ ಸಲಹೆಗಳನ್ನು ನೀಡಿದರು. ನಂತರ ಗೋ ಪೂಜೆ ಹಾಗು ಸಸಿ ನೆಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ಸಪ್ತಾಪಹದಲ್ಲಿ ಬೆಂಗಳೂರಿನ ವಿವಿಧ ಶಾಲೆಯ ಮಕ್ಕಳು, ಪೊಷಕರು ಸಸಿಗಳನ್ನು ನೆಟ್ಟರು. 

ಸಪ್ತಾಹ ಕಾರ್ಯಕ್ರಮದಲ್ಲಿ ರಾಷ್ಟರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗಡೆ, ಖಜಾಂಚಿ ನಾರಾಯಣ್, ಗೋ ಶಾಲೆ ವ್ಯವಸ್ಥಾಪಕರು , ರಾಜ್ಯ ಪ್ರಾಣಿ ಕಲ್ಯಾಣ ಮಂಡಲಿ ರಾಜ್ಯ ಸದಸ್ಯ ಡಾ.ಜೀವನ್ ಕುಮಾರ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!