ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆ ಘೋಷಣೆ ಹಿನ್ನೆಲೆ ಅಧಿಕಾರಿಗಳು ಸಿದ್ದತಾ ಕಾರ್ಯ ತೀವ್ರಗೊಳಿಸಿದ್ದಾರೆ.
ನಗರದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಉಪವಿಭಾಗಾಧಿಕಾರಿ ಅರಳುಕುಮಾರ್ ನಡೆಸಿಕೊಟ್ಟರು.
ತಹಸೀಲ್ದಾರ್ ಟಿ.ಎಸ್.ಶಿವರಾಜು, ಡಿವೈಎಸ್ಪಿ ಟಿ.ರಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸೋಮಶೇಖರ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ ಹಾಜರಿದ್ದರು..
ಚುನಾವಣೆ ವೇಳಾಪಟ್ಟಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಯ 1 ರಿಂದ 31 ವಾರ್ಡ್ ಗಳಿಗೆ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಚುನಾವಣೆ ನಡೆಯುವ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 2021ರ ಆಗಸ್ಟ್ 16 ರಿಂದ ಸೆಪ್ಟೆಂಬರ್ 06 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.
ಚುನಾವಣಾ ವೇಳಾಪಟ್ಟಿಯಂತೆ 2021ರ ಆಗಸ್ಟ್ 16ರ ಸೋಮವಾರದಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಆಗಸ್ಟ್ 23ರ ಸೋಮವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಗಸ್ಟ್ 24ರ ಮಂಗಳವಾರದಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ಆಗಸ್ಟ್ 26ರ ಗುರುವಾರದಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
2021ರ ಸೆಪ್ಟೆಂಬರ್ 03ರ ಶುಕ್ರವಾರದಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ. ಸೆಪ್ಟೆಂಬರ್ 05ರ ಭಾನುವಾರದಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಸೆಪ್ಟೆಂಬರ್ 06ರ ಸೋಮವಾರದಂದು ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ನಡೆಯಲಿದೆ. ಸೆಪ್ಟೆಂಬರ್ 06 ರಂದು ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……