ದೊಡ್ಡಬಳ್ಳಾಪುರ: ನರೇಗಾ ಯೋಜನೆಯಡಿ ಅಂತರ್ಜಲ ಮರು ಪೂರ್ಣಕ್ಕೆ ಆದ್ಯತೆ – ಸಚಿವ ಕೆ.ಎಸ್.ಈಶ್ವರಪ್ಪ

ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಯಂತೆ ಮಳೆ ನೀರನ್ನ ಭೂಮಿಯಲ್ಲಿ ಇಂಗಿಸುವ ಮೂಲಕ ಅಂತರ್ಜಲ ಮರುಪೂರಣ ಎಂಬ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ  ಕೆರೆಕಟ್ಟೆಗಳು, ಕಲ್ಯಾಣಿಗಳನ್ನು ನರೇಗಾದ ಅಡಿಯಲ್ಲಿ ಅಂತರ್ಜಲ ಮರುಪೂರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದರು. 

ತಾಲ್ಲೂಕಿನ ಎಸ್.ಎಸ್.ಘಾಟಿಯಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯ ಮಾಧವ ಸೃಷ್ಠಿಗೆ ಇಂದು ಭೇಟಿ ನೀಡಿದ ಅವರು, ಗೋ ಮಾತೆಗೆ ಪೂಜೆ ಸಲ್ಲಿಸಿ, ಗಿಡ ನೆಟ್ಟು ನೀರುಣಿಸಿ,  ಮಾತನಾಡಿದರು.

ರಾಜ್ಯದ ಎಲ್ಲಾ  ಕೆರೆಕಟ್ಟೆಗಳು, ಕಲ್ಯಾಣಿಗಳನ್ನು ನರೇಗಾದ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು, ಇಡೀ ದೇಶದಲ್ಲಿ ನರೇಗಾ ಕಾಮಗಾರಿಗಳ ಮುಖಾಂತರ ಕರ್ನಾಟಕ ದೇಶದಲ್ಲಿಯೇ ಮೊದಲನೆ ಸ್ಥಾನದಲ್ಲಿದೆ‌ ಎಂದು ತಿಳಿಸಿದರು.

ನರೇಗಾದಡಿಯಲ್ಲಿ ದುಡಿಯುವುದಕ್ಕೆ ಕೂಲಿ ಎಂದು ಹೇಳುವುದಕ್ಕೆ ಇಷ್ಟ ಪಡುವುದಿಲ್ಲ ಎಂದರಲ್ಲದೆ, ಯುದ್ದ ಭೂಮಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವ ರೀತಿಯಲ್ಲಿಯೇ, ಸಮಾಜದಲ್ಲಿ ಬಡವರು ಕೂಡ ಸೈನಿಕರ ರೂಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಬಹುದು ಎಂದರು.

ನಾವೆಲ್ಲರೂ ಪರಿಸರ ಬೆಳೆಸಲು, ಕೆರೆ ಅಭಿವೃದ್ಧಿ ಮಾಡಲು, ಕಲ್ಯಾಣಿಗಳು ಅಭಿವೃದ್ಧಿ ಮಾಡಲು ಈ ಸ್ಥಳ ಸ್ಫೂರ್ತಿ ನೀಡುತ್ತದೆ ಎಂದರಲ್ಲದೆ, ಇಲ್ಲಿ ತರಬೇತಿ ಕೇಂದ್ರ ತೆರೆಯಬೇಕೆಂಬ ಎಂಬ ತೀರ್ಮಾನವನ್ನು ಕೈಗೊಂಡಿರುವುದಾಗಿ ತಿಳಿಸಿದರು.

ಇಲ್ಲಿನ ಪರಿಸರವನ್ನು ನೋಡಿದರೆ, ಪರಿಸರವನ್ನು ಹಾಳು ಮಾಡಬೇಕೆಂಬ ಭಾವನೆ ಯಾರಿಗೂ ಬರುವುದಿಲ್ಲ ಎಂದರಲ್ಲದೆ, ಪ್ರಚಾರಕರ ಜೈದೇವ್ ಅವರು ತಮ್ಮ ಕನಸಿನಂತೆ ಒಂದು ಪರಿಸರ ವ್ಯವಸ್ಥೆ ಮಾಡುವ ಪ್ರಯತ್ನವನ್ನು ನಡೆಸಿದ್ದು, ಆ ಕನಸನ್ನು ನನಸು ಮಾಡುವ ಅವಕಾಶ ನಮಗೆಲ್ಲ ದೊರೆತಿದೆ ಎಂದು ತಿಳಿಸಿದರು.ಗೋಮಾತೆಗೆ ಯಾವಾಗ ಪೂರ್ಣ ಮಹತ್ವ ಸಿಗುತ್ತದೆಯೋ ಅಂದು ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದಕ್ಕೂ ಸಾರ್ಥಕ ಎಂದರಲ್ಲದೆ, ಗೋ ಮಾಂಸಕ್ಕಾಗಿ ಗೋವು ಹಾಗೂ ಅವುಗಳ ಕರುಗಳ ಹತ್ಯೆಯಾಗುತ್ತಿರುವುದು ವಿಷಾದನೀಯ ಎಂದರು ಹಾಗೂ ಗೋ ಮಾತೆಗೆ ಪೂರ್ಣ ಮಾತೆ ಸ್ಥಾನ ಸಿಗುತ್ತದೆಯೋ ಅಲ್ಲಿಯ ತನಕ ಸ್ವಾತಂತ್ರ್ಯ ಸಿಕ್ಕಿದಂತಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹೇಳಿದ್ದಾರೆ ಎಂದರು.

ಕಾಡು ಕಳ್ಳತನದಂತಹ ವ್ಯವಸ್ಥೆಯಿರುವ ಈ ಸಮಾಜದಲ್ಲಿ ನಾವಿಂದು ಗಿಡ ನೆಟ್ಟಿರುವುದು, ಗಿಡ ಬೆಳೆಸಬೇಕೆಂಬುವುದರ ಅರ್ಥ ಎಂದರಲ್ಲದೆ, ಹೀಗೆ ಸಮಾಜದಲ್ಲಿ ಯಾವ ಕಾರ್ಯವಾಗಬೇಕು ಎಂಬುದನ್ನು ಮಾತಲ್ಲಿ ಹೇಳದೆಯೇ ವಿರೇಶ್ ಹೆಗ್ಗಡೆಯವರು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಆಕಾಶದಿಂದ ಬಂದ ಮಳೆ ನೀರು ಸಮುದ್ರಕ್ಕೆ ಹೋಗದಂತೆ ತಡೆದು, ಭೂಮಿಯಲ್ಲಿ ಇಂಗುವಂತೆ ಕ್ರಮವಹಿಸಬೇಕು ಹಾಗೂ ದೇವಸ್ಥಾನಗಳ ಕಲ್ಯಾಣಿಗಳಲ್ಲಿ, ಕೆರೆಗಳಲ್ಲಿನ ಹೂಳು ತೆಗೆದಯುವ ಮೂಲಕ ಅವುಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಸಲಹೆ ನೀಡಿದರು.

ಕೃಷಿ ಹೊಂಡದಲ್ಲಿ ನೀರು ತುಂಬಿದರೆ, ತಮ್ಮ ಜಮೀನಿನಲ್ಲಿ ಅಂತರ್ಜಲದ ಮಟ್ಟವೂ ಹೆಚ್ಚಾಗುತ್ತದೆ ಎಂದರಲ್ಲದೆ, ಸಮಾಜದಲ್ಲಿ ಯಾರು ನಿರುದ್ಯೋಗ ಸಮಸ್ಯೆ ಎದುರಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ನರೇಗಾ ಯೋಜನೆ ಮುಖಾಂತರ ಕೆಲಸ  ಒದಗಿಸುತ್ತಿದ್ದು, ಭೂಮಿಯ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಈ ಯೋಜನೆಯ ಮೂಲಕ ಹೆಚ್ಚು ಹೆಚ್ಚು ಮಾಡಬೇಕು ಎಂದು ಸಲಹೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…… 

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!