ಬೆಂ.ಗ್ರಾ.ಜಿಲ್ಲೆ: ಆಗಸ್ಟ್ 23 ರಿಂದ ಶಾಲಾ-ಕಾಲೇಜುಗಳು, ವಸತಿ ಶಾಲೆಗಳು ಪ್ರಾರಂಭವಾಗಲಿರುವ ಹಿನ್ನೆಲೆ, ಆರೋಗ್ಯ ಇಲಾಖೆಯಿಂದ 2021ರ ಆಗಸ್ಟ್ 16 ರಂದು ಹೋಬಳಿ ಮಟ್ಟದಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಲಸಿಕೆ ಪಡೆಯದೇ ಇರುವ ಶಾಲಾ-ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗಳು ಲಸಿಕೆ ಪಡೆಯುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ವಸತಿ ನಿಲಯಗಳ ವಾರ್ಡನ್, ಅಡುಗೆ ಸಿಬ್ಬಂದಿಗಳು, ಕಾವಲುಗಾರರು, ಚಾಲಕರು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಆಗಸ್ಟ್ 23ರೊಳಗೆ ಕನಿಷ್ಠ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..