
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ “75ನೇ ಸ್ವಾತಂತ್ರ‍್ಯ ದಿನಾಚರಣೆ” ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ, ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಪಿ.ಹೇಮಲತಾ, ದೇವನಹಳ್ಳಿ ಪುರಸಭೆ ಅಧ್ಯಕ್ಷ ಜಿ.ರೇಖಾ, ಉಪಾಧ್ಯಕ್ಷೆ ಪುಷ್ಪಲತಾ ಕೆ.ಆರ್. ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|| ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ವಿವರ: 1. ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಮತ್ತು ರಾಷ್ಟ್ರಗೀತೆ, 2. ನಾಡಗೀತೆ ಮತ್ತು ರೈತಗೀತೆ, 3. ಪರೇಡ್ ವೀಕ್ಷಣೆ, 4. ಗೌರವ ರಕ್ಷೆ, 5. ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ‍್ಯ, ದಿನಾಚರಣೆಯ ಸಂದೇಶ, 6. ಮಾನ್ಯ ಸಚಿವರಿಂದ ಕೋವಿಡ್-19ರ ವಿರುದ್ಧ ಉತ್ತಮ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ ಸನ್ಮಾನ, 7. ವಂದನಾರ್ಪಣೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						