ವಿವಿಧ ಹಬ್ಬಗಳ ಆಚರಣೆ: ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೂರನೇ ಅಲೆಯ ಹರಡುವಿಕೆಯನ್ನು ತಡೆಗಟ್ಟುವ ಕುರಿತು ರಾಜ್ಯ ಸರ್ಕಾರವು 2021ರ ಆಗಸ್ಟ್ 12ರಂದು ಹೊರಡಿಸಿರುವ ಮಾರ್ಗಸೂಚಿಯಂತೆ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಸಾಮಾಜಿಕ, ರಾಜಕೀಯ,‌ ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಮತ್ತು ಬೃಹತ್ ಸಭೆಗಳಿಗೆ ಅನುಮತಿ ಇಲ್ಲವೆಂದು ಆದೇಶಿಸಿರುವ ಹಿನ್ನೆಲೆ, 2021ನೇ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರೆ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಕೋವಿಡ್-19 ಮಾರ್ಗಸೂಚಿಗಳು ಹೊರಡಿಸಲಾಗಿದ್ದು, ಜಿಲ್ಲೆಯ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಮೊಹರಂ ಹಬ್ಬವನ್ನು ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು/ ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ ಹಾಗೂ 2021ರ ಆಗಸ್ಟ್ 12ರಿಂದ 20 ರವರೆಗೆ ಜಿಲ್ಲೆಯಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದ್ದು, ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಪಂಜ , ಆಲಂ ಮತ್ತು ತಾಜಿಯತ್‌ಗಳನ್ನು ಸಾರ್ವಜನಿಕರು ಮುಟ್ಟದ ದೂರದಿಂದ ನೋಡತಕ್ಕದು.ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ, ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದ್ದು, ಖಬರಸ್ಥಾನ್‌ಗಳಿಗೆ ಕೇವಲ ದಫನ ಮಾಡಲು ಮಾತ್ರ ಅನುಮತಿ ನೀಡಲಾಗಿದೆ ಹಾಗೂ ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ಇರುವುದಿಲ್ಲ.ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದು.

ಕೋವಿಡ್ -19 ಸಮುಚಿತ ವರ್ತನೆಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು.ಕೋವಿಡ್ -19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳತಕ್ಕದ್ದು ಹಾಗೂ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು ಹಾಗೂ ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಬೇಕು.

ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟುಬೇಕು. ಆಡಳಿತ ಮಂಡಳಿ/ ಮುತವಲ್ಲಿ/ ಆಡಳಿತಾಧಿಕಾರಿ ಇವರು ಭಕ್ತಾದಿಗಳು ಕುಳಿತುಕೊಳ್ಳುವ ಗರಿಷ್ಠ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು.ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು ಹಾಗೂ ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.

ಮಸೀದಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.ಮೊಹರಂ ಪಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಮಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಭಕ್ತಾದಿಗಳ ಕೆಲಸ ಕಾರ್ಯದ ಕುರಿತು ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್,‌ ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ – ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ,‌ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಪಾರಂಪರಿಕ ಗೌರಿ – ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು  ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ , ಕಲ್ಯಾಣಿ, ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡಬೇಕು  ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್ ಸ್ರ್ಕೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು.

ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್ -19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.ಗಣೇಶೋತ್ಸವ ಆಚರಣೆ ಕಾಲಕ್ಕೆ, ಸಂದರ್ಭಕ್ಕೆ ಅನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಕೋವಿಡ್ -19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ , ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ , ಅಗ್ನಿಶಾಮಕ ಇಲಾಖೆ , ಜಿಲ್ಲಾಡಳಿತ ಹಾಗೂ ಇತರೆ ‘ ಇಲಾಖೆಗಳಿಂದ ಹೊರಡಿಸಲಾದ ಸೂಚನೆಗಳು / ಮಾರ್ಗಸೂಚಿಗಳು, ಪ್ರಾಮಾಣಿತ ಕಾರ್ಯವಿಧಾನ(SOP)ಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

2021ರ‌ ಆಗಸ್ಟ್ 06ರ ಮಾರ್ಗಸೂಚಿಯಲ್ಲಿ ಮನೋರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ – ಸಮಾರಂಭಗಳನ್ನು ನಿಷೇಧಿಸಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ, ಸಮಾರಂಭಗಳಿಗೆ ಅನುಮತಿ‌ ನೀಡದೆ ಇರುವುದರಿಂದ ಈ ಎಲ್ಲ ಹಬ್ಬಗಳ ಸಂದರ್ಭದಲ್ಲಿ ಯಾವುದೇ ವಿಧದ ಮೆರವಣಿಗೆಯನ್ನು ಜನರ ಒಗ್ಗೂಡುವಿಕೆಯನ್ನು ಮಾಡತಕ್ಕದ್ದಲ್ಲ.

ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಮೊಹರಂ ಮತ್ತು ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 50 ರಿಂದ 60 ರನ್ವಯ ಮತ್ತು ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳಡಿಯಲ್ಲಿ ಶಿಸ್ತು ಕ್ರಮವನ್ನು ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!