ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ ಅವರಿಗೆ ಗೌರವ ಸಮರ್ಪಣೆ / ಸ್ವಾತಂತ್ರ್ಯ ಯೋಧರು ನಮ್ಮೆಲ್ಲರ ಭಾಗ್ಯ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಬ್ರಿಟಿಷರ ವಿರುದ್ಧ ಹೋರಾಡಿ ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನಗಳ ವಿಚಾರಗಳನ್ನು   ಇಂದಿನ ಯುವಪೀಳಿಗೆ ಮಾದರಿಯಾಗಿ ಸ್ವೀಕರಿಸಿ ಬಲಿಷ್ಠ ಭಾರತ ನಿರ್ಮಾಣಕ್ಕೆ ತಮ್ಮ ಶ್ರಮವನ್ನು ವಿನಿಯೋಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲಹೆ ಮಾಡಿದರು.

75 ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ  ಅಂಗವಾಗಿ  ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ನಾಗಪ್ಪ ಅವರನ್ನು  ಅವರ ಸ್ವಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಿ ಗೌರವ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವೇ ಅತ್ಯಂತ ರೋಚಕ ಮತ್ತು ಪ್ರೇರಣದಾಯಕವಾಗಿದೆ. ಈ ಸಂಗ್ರಾಮದಲ್ಲಿ  ಅವಿರತ ಹೋರಾಟ ಮಾಡಿ  ಸಾವಿರಾರು ದೇಶಪ್ರೇಮಿಗಳು ತಮ್ಮ ಇಡೀ ಬದುಕನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಪರಕೀಯರ ದಾಸ್ಯದ ಕಪಿಮುಷ್ಠಿಯಿಂದ ದೇಶವನ್ನು ಬಿಡುಗಡೆ ಮಾಡಲು ಹಾಗೂ ದೇಶದ ಎಲ್ಲಾ ಪ್ರಜೆಗಳು ಸ್ವತಂತ್ರವಾಗಿ ಜೀವನ ಮಾಡಲು ಲೆಕ್ಕವಿಲ್ಲದಷ್ಟು ತ್ಯಾಗ ಬಲಿದಾನಗಳು ಆಗಿ ಹೋಗಿವೆ. ಇವೆಲ್ಲವನ್ನೂ ಯುವಪೀಳಿಗೆ ಗಂಭೀರವಾಗಿ ಪರಿಗಣಿಸಿ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ಋಣವನ್ನು ತೀರಿಸಬೇಕು. ಈ ಹಿಂದೆ ನಮ್ಮ ಹಿರಿಯರು ದೇಶಭಕ್ತಿಯ ಬದ್ಧತೆಯಿಂದ ಬ್ರಿಟಿಷರ ವಿರುದ್ಧ ಹೋರಾಟ ಮಾಡದೇ ಇದ್ದಿದ್ದರೆ ಇಂದಿಗೂ ಪರಕೀಯರ ಗುಲಾಮರಾಗಿಯೇ ಇರಬೇಕಾದ ಪರಿಸ್ಥಿತಿ ಇರುತ್ತಿತ್ತು. ಆದರೆ, ಅಂದಿನ ಹಿರಿಯರಲ್ಲಿ ಅನೇಕರು  ಇವೆಲ್ಲವನ್ನೂ ಮನಗಂಡು ತಮ್ಮ ವೈಯಕ್ತಿಕ ಜೀವನವನ್ನು ಸಂಪೂರ್ಣವಾಗಿ ಬದಿಗಿಟ್ಟು ಹಗಲಿರುಳು ದೇಶಸೇವೆ ಮಾಡಿದ್ದಾರೆ. ಅವರು ಮಾಡಿರುವ ಮಹತ್ಕಾರ್ಯಕ್ಕೆ ಎಂದೆಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಸ್ವಾತಂತ್ರ್ಯ ಸೇನಾನಿಗಳಲ್ಲಿ ಇಂದು ಬೆರಳೆಣಿಕೆಯಷ್ಟು ಮಂದಿಯಷ್ಟೇ ನಮ್ಮ ಮಧ್ಯೆ ಇದ್ದಾರೆ. ಅವರನ್ನು ಕಾಣುವ, ಅವರೊಂದಿಗೆ ಮಾತನಾಡುವುದು ನಮ್ಮೆಲ್ಲರ ಪುಣ್ಯ ಮತ್ತು ಹೆಮ್ಮೆಯಾಗಿದೆ. ಇಂದಿನ ಯುವಪೀಳಿಗೆಗೆ ಅವರ ಅನುಭವ, ತತ್ವಾದರ್ಶಗಳ ಜೊತೆಗೆ ದೇಶಪ್ರೇಮದ ಸಂದೇಶಗಳು ಉತ್ತಮ ಭವಿಷ್ಯ ಮತ್ತು ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಪಾಠಗಳಾಗಬೇಕು. ಜಿಲ್ಲಾಡಳಿತ ಸದಾ ಸ್ವಾತಂತ್ರ್ಯ ಹೋರಾಟಗಾರರ ಹಿತಕಾಯುವಲ್ಲಿ ಬದ್ಧವಾಗಿರುತ್ತದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಳ್ಳೂರು ನಾಗಪ್ಪ, ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ ಪಾತ್ರ ಹೆಚ್ಚಾಗಿದೆ. ಭಕ್ತರಹಳ್ಳಿಯಲ್ಲಿ ದೇಶಪ್ರೇಮಿಗಳ ವಿರುದ್ಧ ಗೋಲಿಬಾರ್ ಆದಂತಹ ಸಂದರ್ಭದಲ್ಲಿ ಮಳ್ಳೂರು ಜಿ.ಪಾಪಣ್ಣನವರ ನಾಯಕತ್ವದಲ್ಲಿ ಅನೇಕರು ಬ್ರಿಟಿಷರಿಗೆ ಸೆಡ್ಡು ಹೊಡೆದರು. ಆ ಸಂದರ್ಭದಲ್ಲಿ ರೈಲು ಹಳಿಗಳನ್ನು ಕಿತ್ತೊಗೆದು  ರಸ್ತೆಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗಿತ್ತು. ಇದಕ್ಕೆ ಬ್ರಿಟಿಷರು ತುಂಬಾ ಕ್ರೌರ್ಯತನದ ಉತ್ತರ ನೀಡಿ ನಮ್ಮ ಅನೇಕ ಜನ ಸಹ ಹೋರಾಟಗಾರರನ್ನು ಜೈಲಿಗೆ ಅಟ್ಟಿದ್ದರು ಮತ್ತು ಕಾಡುಗಳಲ್ಲಿ ಬಿಟ್ಟು ಬಂದಿದ್ದರು. ಆದರೂ ಜಗ್ಗಲಿಲ್ಲ. ಭಕ್ತರಹಳ್ಳಿಯಲ್ಲಿ ಅಂದಿನ ಪೊಲೀಸರ ಬಂದೂಕಿಗೆ ಇಬ್ಬರು ಬಲಿಯಾದರು ಎಂದು ತಮ್ಮ ದಶಕಗಳ ನೆನಪಿನ ಬುತ್ತಿಯನ್ನು ಮೆಲುಕು ಹಾಕಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರ ಕಾರ್ಯವೈಖರಿ ಬಗ್ಗೆ ಮಳ್ಳೂರು ನಾಗಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿಯೂ ಉತ್ತಮ ಜನಪರ ಕೆಲಸಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ನೀವು   ನನ್ನ  ಕುಟುಂಬದ  ಸದಸ್ಯರಂತೆ ಇದ್ದು,  ಬಡವರು ಮತ್ತು ಅಸಹಾಯಕರು ದುರ್ಬಲ ವರ್ಗಗಳ ಪರವಾದ ಕೆಲಸ ಮಾಡುತ್ತಿರುವುದರಿಂದ ನನ್ನ 

ಕುಟುಂಬದ ಸದಸ್ಯರ ಮೇಲಿರುವ ಆತ್ಮೀಯತೆ,ಪ್ರೀತಿ ನಿಮ್ಮ‌ಮೇಲಿದ್ದು ನೀವು ನನ್ನ ಮೊಮ್ಮಗಳಿದ್ದಂತೆ ಎಂದು ಹಸನ್ಮುಖಿಯಾದರು. ನಿಮ್ಮ ಮೇಲೆ 

ಆತ್ಮೀಯತೆ ಇರುವುದರಿಂದ ಹಾಗೂ ಹಿರಿಯನೆಂಬ ಸಲುಗೆ ತೆಗೆದುಕೊಂಡು ಕಿವಿಮಾತು  ಹೇಳುತ್ತಿದ್ದು  ತಪ್ಪು  ತಿಳಿಯುವುದು ಬೇಡ ಎಂದು ಹಲವು ಸಕಾರಾತ್ಮಕ ಸಲಹೆಗಳನ್ನು ನೀಡಿದರು. .  

ಇದೇ ವೇಳೆ ಜಿಲ್ಲಾಧಿಕಾರಿ ಆರ್.ಲತಾ ಅವರು ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಅವರ ಆಶೀರ್ವಾದ ಪಡೆಯುವ ಜೊತೆಗೆ ಅವರ ಕುಶಲೋಪರಿ ವಿಚಾರಿಸಿದರು  ಹಾಗೂ ಸ್ವಾತಂತ್ರ್ಯ ಯೋಧರು ದೇಶದ ಮತ್ತು ಸಮಾಜದ ಅತ್ಯಮೂಲ್ಯ ಆಸ್ತಿಯಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಕಿರಿಯರಿಗೆ ಸಲಹೆ, ಮಾರ್ಗದರ್ಶನ ನೀಡುತ್ತಿರಬೇಕು ಎಂದು ಮನವಿ ಮಾಡಿದರು.  

ಈ ಸಂದರ್ಭದಲ್ಲಿ  ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ತಹಸೀಲ್ದಾರ್ ರಾಜೀವ್, ತಾ.ಪಂ.ಇಒ ಚಂದ್ರಕಾಂತ್ ಹಾಗೂ ನಾಗಪ್ಪ ಅವರ ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!