ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಏರ್ಪಡಿಸಲಾದ “75ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜು(ಎಂ.ಟಿ.ಬಿ.) ಅವರು ಪರೇಡ್ ವೀಕ್ಷಿಸಿ, ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.
ಗಗನವನ್ನು ತ್ರಿವರ್ಣಮಯಗೊಳಿಸಿದ ಆಕರ್ಷಕ ಬಲೂನುಗಳು: “75ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್. ನಾಗರಾಜು(ಎಂ.ಟಿ.ಬಿ.), ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಹಾಗೂ ಇತರೆ ಗಣ್ಯರು, ಆಗಸಕ್ಕೆ ಹಾರಿಬಿಟ್ಟ ಆಕರ್ಷಕ ತ್ರಿವರ್ಣ ಬಲೂನುಗಳು ನೋಡುಗರ ಗಮನಸೆಳೆಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..