ದೊಡ್ಡಬಳ್ಳಾಪುರ: ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದರು.
“75ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಎಪಿಎಂಸಿ ಆಧ್ಯಕ್ಷ ಎನ್.ವಿಶ್ವನಾಥ್, ತಾಲೂಕು ಪಂಚಾಯಿತಿ ಇಒ ಟಿ. ಮುರುಡಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್ಪೆಕ್ಟರ್ ಸತೀಶ್, ಬಿಇಒ ಶುಭಮಂಗಳ ಮತ್ತಿತರರು ವೇದಿಕೆಯಲ್ಲಿದ್ದಾರೆ. (ಅಪ್ಡೇಟ್ ನೀಡಲಾಗುವುದು)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..