ಬೆಂ.ಗ್ರಾ.ಜಿಲ್ಲೆ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಗಸ್ಟ್ 15ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ತಾಲ್ಲೂಕು ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯುವ ಬಗ್ಗೆ ಜಾಗೃತಿ ಸಂದೇಶದ ಬ್ಯಾನರ್ ಅನ್ನು ಅಳವಡಿಸಿ, ಲಸಿಕೆ ಪಡೆದ ಎಲ್ಲರಿಗೂ ಸಿಹಿಯನ್ನು ವಿತರಿಸಲು ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರದ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಗಳ ಕಚೇರಿಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಆಚರಿಸಲು ಕ್ರಮವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..