ಬೆಂ.ಗ್ರಾ.ಜಿಲ್ಲೆ: “75ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಮೃತ ಮಹೋತ್ಸವದ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ ಪ್ರವಾಸಿ ಮಂದಿರದ ಆವರಣದಲ್ಲಿಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಾಥಾನ್ ಓಟಕ್ಕೆ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ. ರವಿಕುಮಾರ್, ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್ ಆರಳೋಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಪೋಲಿಸ್ ಸಿಬ್ಬಂದಿ, ಹಿಂದುಳಿದ ವರ್ಗ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.ದೇವನಹಳ್ಳಿ ಪ್ರವಾಸಿ ಮಂದಿರದಿಂದ ದೇವನಹಳ್ಳಿಯ ಐತಿಹಾಸಿಕ ಕೋಟೆಯವರೆಗೆ ವಿದ್ಯಾರ್ಥಿಗಳು ಮ್ಯಾರಾಥಾನ್ ನಡೆಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..