ದೊಡ್ಡಬಳ್ಳಾಪುರ: ನಾವು ಆಚರಿಸುತ್ತಿರುವ 75ನೇ ಸ್ವಾತಂತ್ರ್ಯ ದಿನಾಚರಣೆಯು ನಮ್ಮ ಪೂರ್ವಜರು ಮಾಡಿರುವ ತ್ಯಾಗದ ಫಲ, ಅವರ ಬಲಿದಾನವನ್ನು ಸ್ಮರಿಸುತ್ತಾ, ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುವ ಜವಾಬ್ದಾರಿ ಎಲ್ಲಾ ಭಾರತೀಯರ ಮೇಲಿದೆ ಎಂದು ಎಂ.ಎಸ್.ವಿ ಪಬ್ಲಿಕ್ ಶಾಲೆಯ ಮುಖ್ಯಸ್ಥ ಸುಬ್ರಮಣ್ಯ.ಎ ತಿಳಿಸಿದರು.
ನಗರದ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕರೊನಾ ವೈರಸ್ ಪರಿಸ್ಥಿತಿ ನಡುವೆಯೇ ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. 1947 ಆಗಸ್ಟ್ 14 ಮಧ್ಯರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಮುಕ್ತವಾಯಿತು. ಸುಮಾರು 200 ವರ್ಷಗಳ ಕಾಲ ನಮ್ಮ ಹಕ್ಕಾದ ಸ್ವಾತಂತ್ರ್ಯ ಪಡೆಯಲು ಅಸಂಖ್ಯಾತ ಜನ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಬಲಿದಾನ-ತ್ಯಾಗದಿಂದಲೇ ನಮಗೆ ಸ್ವಾತಂತ್ರ್ಯ ಸಿಕ್ಕಿದೆ.
ಬ್ರಿಟೀಷರಿಂದ ಸ್ವಾತಂತ್ರ್ಯ ಸಿಕ್ಕಂತೆ, ಈ ಮಹಾಮಾರಿ ಕರೊನಾದಿಂದ ಮುಕ್ತಿ ದೊರೆತು ತ್ವರಿತವಾಗಿ ಶಾಲೆಗಳು ಆರಂಭವಾಗ ಬೇಕಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯ ಮೇಲೇ ಕರೊನಾ ಕರಿ ನರಳು ತೀವ್ರತರವಾದ ಪರಿಣಾಮ ಉಂಟಾಗಿದ್ದು, ಶೀಘ್ರವಾಗಿ ಕರೊನಾ ಸೋಂಕು ಮುಕ್ತ ದೇಶವಾಗಲಿ ಎಂದರು.
ಶಾಲೆಯ ಪ್ರಾಂಶುಪಾಲರಾದ ನಾಗರತ್ನ.ಎನ್.ಪಾಲನ್ ಮತ್ತು ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..