ಬೆಂಗಳೂರು: ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕ ನೀಡಿ ಸ್ವಾಗತ ಕೋರಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರರನ್ನ ಮುಖ್ಯಮಂತ್ರಿ ಸ್ವಾಗತಿಸಲು, ವಿಮಾನದ ಬಳಿಯೇ ತೆರಳಿದ ಮುಖ್ಯಮಂತ್ರಿ ಬೊಮ್ಮಾಯಿವರು ವಿಶೇಷ ಹಾರ, ಶಾಲು ಸೇರಿದಂತೆ ಪುಸ್ತಕ ನೀಡಿ ಅವರನ್ನು ಬರ ಮಾಡಿಕೊಂಡರು.
ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪರಾಷ್ಟ್ರಪತಿಗಳನ್ನ ಸ್ವಾಗತಿಸಿದರು.
ಸಚಿವರಾದ ಅಶ್ವತ್ಥನಾರಾಯಣ್, ಸಂಸದ ಪಿ.ಸಿ.ಮೋಹನ್ ಸಹ ಆಗಮಿಸಿದ್ರು. ಮತ್ತೊಂದೆಡೆ ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ಉಪರಾಷ್ಟ್ರಪತಿಗಳು ಬೆಂಗಳೂರಿನತ್ತ ತೆರಳಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……