ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

ಮಂಗಳೂರು: ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯಿತಿ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. 

ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯಿತಿ ಅಳವಡಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!