ಬೆಂಗಳೂರು: ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸ್ವಯಂ ಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಕೊಳ್ಳಬೇಕು. ಆರಭದಲ್ಲಿ ಕ್ಷಯ ರೋಗ ಪತ್ತೆಯಾದರೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಗುಣಮುಖರಾದವರಿಗೆ ಕ್ಷಯ ಸೋಂಕು ಕಾಣಿಸಿಕೊಳ್ಳುತ್ತಿದೆ. ಕಪ್ಪು ಶಿಲೀಂದ್ರ ಪತ್ತೆ ಮಾಡುವ ರೀತಿ ಕ್ಷಯ ರೋಗದ ತಪಾಸಣೆ ಮಾಡಲಾಗುವುದು. ಇದೇ ತಿಂಗಳು 16 ರಿಂದ 30 ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ ಎಂದರು.
ಕ್ಷಯ ರೋಗವು ಶ್ವಾಸಕೋಶದ ಸಮಸ್ಯೆಯಿಂದ ಬರುತ್ತದೆ. ಕೋವಿಡ್ ಕೂಡ ಶ್ವಾಸಕೋಶದ ಸಮಸ್ಯೆಯಿಂದ ಬರುತ್ತದೆ. ಅದಕ್ಕಾಗಿ ಕ್ಷಯ ವ್ಯಾಪಕವಾಗಿ ಹರಡದಂತೆ ನೋಡಲು ತಪಾಸಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇತರರಿಗೆ ಕ್ಷಯ ರೋಗ ಶೇ 33% ರಷ್ಟು ಹೆಚ್ಚಳವಾಗಿದೆ. ಯಾವ ವೃತ್ತಿಯವರಿಗೆ ಈ ರೋಗ ಬರುತ್ತದೆ ನೋಡಿ ತಪಾಸಣೆ ಮಾಡಲಾಗುತ್ತಿತ್ತು. ಈಗ ಕೊವಿಡ್ ನಿಂದ ಗುಣಮುಖರಾದವರ ತಪಾಸಣೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..