ಮಾನವ ಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿನೂತನ ಪರಿಹಾರ ಒದಗಿಸಲು ಮುಂದಾಗುವಂತೆ ವಿಜ್ಞಾನಿಗಳಿಗೆ ಉಪ ರಾಷ್ಟ್ರಪತಿ ಕರೆ

ಬೆಂಗಳೂರು: ಹವಾಮಾನ ಬದಲಾವಣೆಯಿಂದ ಕೃಷಿ, ಆರೋಗ್ಯ ಮತ್ತು ವೈದ್ಯಕೀಯದವರೆಗೆ ಮಾನವಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿಜ್ಞಾನಿಗಳು ವಿನೂತನ ಪರಿಹಾರಗಳನ್ನು ಶೋಧಿಸುವಂತೆ ಉಪರಾಷ್ಟ್ರಪತಿ  ಎಂ.ವೆಂಕಯ್ಯ ನಾಯ್ಡು ಅವರು ಕರೆ ನೀಡಿದ್ದಾರೆ.

ಬೆಂಗಳೂರಿನ ಜವಾಹರಲಾಲ್ ನೆಹರೂ ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆಎನ್.ಸಿ.ಎ.ಎಸ್.ಆರ್) ದಲ್ಲಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ಉತ್ಕೃಷ್ಟತೆಯನ್ನು ಸಾಧಿಸಲು ಮತ್ತು ಜನರ ಜೀವನವನ್ನು ಸುಧಾರಿಸಲು ಸಂಶೋಧನೆಗಾಗಿ ಶ್ರಮಿಸುವಂತೆ ವಿಜ್ಞಾನಿಗಳಿಗೆ ಒತ್ತಾಯಿಸಿದರು. “ವಿಜ್ಞಾನದ ಉದ್ದೇಶ ಜನರ ಜೀವನವನ್ನು ಸಂತೋಷ, ಆರೋಗ್ಯಕರ ಮತ್ತು ಆರಾಮದಾಯಕವಾಗಿ ಮಾಡುವುದಾಗಿದೆ”, ಎಂದು ಅವರು ಪುನರುಚ್ಚರಿಸಿದರು.

ವೈಜ್ಞಾನಿಕ ಸಂಶೋಧನೆಗಳು ಸಮಾಜಕ್ಕೆ ಪ್ರಸ್ತುತವಾಗಬೇಕು ಎಂದು ಒತ್ತಿ ಹೇಳಿದ ಅವರು, ಈ ಸಂದರ್ಭದಲ್ಲಿ, ಟ್ರಾನ್ಸ್ ಲೆಷನಲ್ ಸಂಶೋಧನೆಯು ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದರು. ಜೆ.ಎನ್.ಸಿ.ಎ.ಎಸ್.ಆರ್ 3೦೦ಕ್ಕೂ ಹೆಚ್ಚು ಪೇಟೆಂಟ್ ಗಳನ್ನು ಸೃಷ್ಟಿಸಿದೆ ಮತ್ತು ಸ್ಥಳೀಯ ಆವಿಷ್ಕಾರಗಳ ಆಧಾರದ ಮೇಲೆ ಕೆಲವು ನವೋದ್ಯಮಗಳ ಸ್ಥಾಪನೆಯನ್ನೂ ಉತ್ತೇಜಿಸಿದೆ ಎಂದು ಅವರು ಶ್ಲಾಘಿಸಿದರು.

ಜೆ.ಎನ್.ಸಿ.ಎ.ಎಸ್.ಆರ್ ವಿಸ್ತೃತ ಶ್ರೇಣಿಯ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಹೆಸರುವಾಸಿಯಾಗಿದೆ ಎಂದು ಹೇಳಿದ ಅವರು, ಸಂಶ್ಲೇಷಿತ ಜೀವಶಾಸ್ತ್ರ, ಕಂಪ್ಯೂಟೇಶನಲ್ ಜೀವಶಾಸ್ತ್ರ, ಉನ್ನತ ಕಾರ್ಯಕ್ಷಮತೆಯ ಎಂಜಿನಿಯರಿಂಗ್ ಉತ್ಪನ್ನಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಹೊಸ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸುವಂತೆ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಸಲಹೆ ನೀಡಿದರು. ಕೃಷಿಯನ್ನು ‘ದೇಶದ ಮೂಲ ಸಂಸ್ಕೃತಿ’ ಎಂದು ಬಣ್ಣಿಸಿದ ಉಪರಾಷ್ಟ್ರಪತಿಯವರು, ವಿಜ್ಞಾನಿಗಳು ಕೃಷಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮ್ಮ ಗಮನವನ್ನು ಕೇಂದ್ರೀಕರಿಸಬೇಕೆಂದು ಬಯಸಿದರು.

ಯಾವುದೇ ದೇಶದ ಪ್ರಗತಿ ಮತ್ತು ತಾಂತ್ರಿಕ ಪ್ರಗತಿಗೆ ವಿಜ್ಞಾನವು ಬೆನ್ನೆಲುಬಾಗಿದೆ ಎಂಬುದನ್ನು ಪ್ರಸ್ತಾಪಿಸಿದ ಉಪರಾಷ್ಟ್ರಪತಿಯವರು ಭಾರತದ ಬೃಹತ್ ಜನಸಂಖ್ಯಾ ಪ್ರಯೋಜನವನ್ನು ಉಲ್ಲೇಖಿಸಿ, ಚಿಕ್ಕ ವಯಸ್ಸಿನಿಂದಲೇ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು ಮತ್ತು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುವ ವಿಶ್ವದರ್ಜೆಯ ವೈಜ್ಞಾನಿಕ ಸಂಶೋಧನೆಯನ್ನು ಉತ್ತೇಜಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಜೆ.ಎನ್.ಸಿ.ಎ.ಎಸ್.ಆರ್. ತನ್ನ ಪರಿಣತಿಯ ಕ್ಷೇತ್ರಗಳಲ್ಲಿ ಉನ್ನತ ಸಂಸ್ಥೆಗಳಲ್ಲಿ ಸ್ಥಾನಗಳಿಸುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅತ್ಯುತ್ತಮ ಪ್ರಭಾವ ಬೀರಿದೆ ಎಂದು ಶ್ಲಾಘಿಸಿದ ಅವರು, ದೇಶದಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಮತ್ತು ಸಂಶೋಧನಾ ಫಲಶ್ರುತಿಗಳನ್ನು ಸುಧಾರಿಸಲು ಇದು ಅಪಾರ ಕೊಡುಗೆ ನೀಡಬಹುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಬಗ್ಗೆ ಪ್ರಸ್ತಾಪಿಸಿದ ಅವರು, ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಹೊಸ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳನ್ನು ಪಡೆಯುವುದನ್ನು ಇದು ಖಚಿತಪಡಿಸುತ್ತದೆ ಎಂದು ಹೇಳಿದರು. ‘ಇದು ಸರಿಯಾದ ಶೈಕ್ಷಣಿಕ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಮತ್ತು ಅವರ ಜ್ಞಾನದ ನೆಲೆಯನ್ನು ಶ್ರೀಮಂತಗೊಳಿಸುತ್ತದೆ ಮತ್ತು ಅವರ ಕೌಶಲ್ಯವನ್ನು ಹೆಚ್ಚಿಸುತ್ತದೆ” ಎಂದು ಹೇಳಿದರು.

ತಮ್ಮ ಗುರಿಗಳನ್ನು ಸಾಧಿಸಲು ಯಾವುದೇ ಅವಕಾಶವನ್ನು ಕೈಚೆಲ್ಲಬೇಡಿ ಎಂದು ಉಪರಾಷ್ಟ್ರಪತಿಗಳು ವಿದ್ಯಾರ್ಥಿಗಳಿಗೆ ತಿಳಿಸಿದರು. “ಕಠಿಣ ಪರಿಶ್ರಮಕ್ಕೆ ಪರ್ಯಾಯ ಯಾವುದೂ  ಇಲ್ಲ ಎಂಬುದನ್ನು ದಯವಿಟ್ಟು ನೆನಪಿಡಿ. ನೀವು ಯಾವಾಗಲೂ ಎಲ್ಲೆಗಳನ್ನು ದಾಟಿ ಸಾಧಿಸಲು ಪ್ರಯತ್ನಿಸಬೇಕು ಮತ್ತು ಯಥಾಸ್ಥಿತಿಯ ಬಗ್ಗೆ ತೃಪ್ತರಾಗಬಾರದು ಅಥವಾ ಸಂತೃಪ್ತರಾಗಬಾರದು”, ಎಂದು ಅವರು ಸಲಹೆ ನೀಡಿದರು.

ಬೆಂಗಳೂರು ಹೆಚ್ಚಿನ ಸಂಖ್ಯೆಯ ಕೆರೆಗಳಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಹೇಳಿದ ಶ್ರೀ ನಾಯ್ಡು, ಜನರ ನಿರ್ಲಕ್ಷ್ಯ ಅಥವಾ ಅಕ್ರಮ, ಅತಿಕ್ರಮಣಗಳಿಂದಾಗಿ ಈ ಜಲಕಾಯಗಳಲ್ಲಿ ಅನೇಕವು ಅವನತಿ ಹೊಂದುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಬೆಂಗಳೂರು ಮತ್ತು ಅದರಾಚೆಗಿನ ಕೆರೆಗಳ ಪುನರುತ್ಥಾನ ಮತ್ತು ಸಂರಕ್ಷಣೆಗೆ ಸಕಲ ಪ್ರಯತ್ನಗಳನ್ನು ಮಾಡಲು ಅವರು ಕರೆ ನೀಡಿದರು.

ಜೆ.ಎನ್.ಸಿ.ಎ.ಎಸ್.ಆರ್ ವಿದ್ಯಾರ್ಥಿಗಳಲ್ಲಿ ಶೇ.40ರಷ್ಟು ಬಾಲಕಿಯರು ಎಂಬ ಅಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ ಉಪರಾಷ್ಟ್ರಪತಿಯವರು, ಇತರ ವೈಜ್ಞಾನಿಕ ಸಂಸ್ಥೆಗಳಲ್ಲಿಯೂ ಇದೇ ರೀತಿಯ ಆರೋಗ್ಯಕರ ಪ್ರವೃತ್ತಿಯನ್ನು ಕಾಣಲು ಬಯಸುವುದಾಗಿ ಹೇಳಿದರು. 

ಪ್ರತಿಷ್ಠಿತ ಅಂತಾರಾಷ್ಟ್ರೀಯ ಎನಿ ಪ್ರಶಸ್ತಿ 2020ಕ್ಕೆ ನಾಮನಿರ್ದೇಶನಗೊಂಡಿರುವ ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಅವರನ್ನು ಅಭಿನಂದಿಸಿದ ಅವರು, ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಯುವ ವಿಜ್ಞಾನಿಗಳಿಗೆ ಅವರು ಪ್ರೇರಣೆಯಾಗಿದ್ದಾರೆ ಎಂದು ಅವರನ್ನು ಅಭಿನಂದಿಸಿದರು.

ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್  ಗೆಹ್ಲೋಟ್,  ಮುಖ್ಯಮಂತ್ರಿ ಬಸವರಾಜ್  ಬೊಮ್ಮಾಯಿ, ಕರ್ನಾಟಕ ಉನ್ನತ ಶಿಕ್ಷಣ, ಐಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ, ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್  ಮತ್ತು ಜೆ.ಎನ್.ಸಿ.ಎ.ಎಸ್.ಆರ್ ಅಧ್ಯಕ್ಷ ಪ್ರೊ.ಜಿ.ಯು. ಕುಲಕರ್ಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!