ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು – ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಇಂದಿನ ಜಾಗತಿಕ ಯುಗದಲ್ಲಿ  ಉದ್ಯೋಗವಕಾಶಗಳು ವಿಪುಲವಾಗಿವೆ. ಆದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಹಾಗೂ ಅಗತ್ಯ ಶಿಕ್ಷಣ ಹೊಂದಿದವರಿಗೆ ತಕ್ಷಣವೇ ಉದ್ಯೋಗಾವಕಾಶಗಳು ದೊರೆಯಲಿದ್ದು, ನಮ್ಮ ಶೈಕ್ಷಣಿಕ ಆಯ್ಕೆ ಇದಕ್ಕೆ ಪೂರಕವಾಗಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ತಿಳಿಸಿದರು.

ಶ್ರೀ ರಾಮ ಆಸ್ಪತ್ರೆ ಹಾಗೂ ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸಹಯೋಗದಲ್ಲಿ  ಎಸ್‌ಎಸ್‌ಎಲ್‌ಸಿ ನಂತರ ಮುಂದೇನು -ಅವಕಾಶಗಳ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಮೊದಲಾದ ಸಾಂಪ್ರದಾಯ ಶಿಕ್ಷಣಕ್ಕೆ ವಿದ್ಯಾರ್ಥಿಗಳು ದಾಖಲಾಗುವುದು ಸಹಜ. ತಮ್ಮ ಸಹಪಾಠಿ ತೆಗೆದುಕೊಂಡ ಎಂದು ಅಥವಾ ಪೋಷಕರ ಒತ್ತಾಯದಿಂದ ತಮಗಿಷ್ಟವಿರದೇ ಇರುವ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡು, ಮುಂದೆ ಪರಿತಪಿಸುವ ಉದಾಹರಣೆಗಳು ಸಹ ಸಾಕಷ್ಟಿವೆ. ಎಲ್ಲರೂ ಒಂದೇ ತೆರೆದ ಶಿಕ್ಷಣ ಪಡೆದರೆ ಸಹಜವಾಗಿ ಸ್ಪರ್ಧೆ ಏರ್ಪಡುತ್ತದೆ. ಈ ದಿಸೆಯಲ್ಲಿ ನಮ್ಮ ಆಯ್ಕೆ ವಿಭಿನ್ನವಾಗಿ ನಮ್ಮ ಆಸಕ್ತಿಗೆ ತಕ್ಕಂತೆ ಇರಬೇಕು. ಎಸ್‌ಎಸ್‌ಎಲ್‌ಸಿ ನಂತರ, ಐಟಿಐ, ವಿವಿಧ ವಿಷಯಗಳ ಡಿಪ್ಲೋಮೋ ಕೋರ್ಸ್ಗಳು ಸಾಕಷ್ಟಿವೆ. ಇವುಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. 

ಕೊವಿಡ್ ಸಂಕಷ್ಟದ ಎರಡು ವರ್ಷಗಳಿಂದ  ಶಿಕ್ಷಣ, ವಾಣಿಜ್ಯ ಮೊದಲಾದ ಹಲವಾರು ಕ್ಷೇತ್ರಗಳು ನಷ್ಟ ಅನುಭವಿಸಿವೆ. ಆದರೆ ವೈದ್ಯಕೀಯ ಕ್ಷೇತ್ರ ಹಿಂದೆಂದಿಗಿಂತಲೂ ಸಕ್ರಿಯವಾಗಿರುವ ಸಂದರ್ಭ ಎದುರಾಗಿದೆ. ಈ ದಿಸೆಯಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ಗಳನ್ನು ಮಾಡಿಕೊಳ್ಳುವವರಿಗೆ ವಿಪುಲ ಉದ್ಯೋಗವಕಾಶಗಳಿವೆ. ಕೈಗಾರಿಕಾ ಪ್ರದೇಶಗಳು ಹೆಚ್ಚಾಗುತ್ತಿದ್ದು, ಇಲ್ಲಿ ಐಟಿಐ, ಡಿಪ್ಲೋಮೋ ಮಾಡಿದವರಿಗೆ ಉದ್ಯೋಗವಕಾಶಗಳಿವೆ. ಇದರಲ್ಲಿ ನಿಮ್ಮ ಸಾಮರ್ಥ್ಯ ತೋರಿಸಿದರೆ ಹೆಚ್ಚಿನ ಉತ್ತೇಜನ ನೀಡಿ, ಹಂತಹಂತವಾಗಿ ಮೇಲೇರಬಹುದಾಗಿದೆ ಎಂದು ತಿಳಿಸಿದರು.

ಎಚ್.ಇ.ಎಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹುತೇಕ ಯುವಕರು ಪದವಿಗಳನ್ನು ಪಡೆದು  ಕೌಶಲ್ಯವಿಲ್ಲದ ಕಾರಣ ಉದ್ಯೋಗದ ಸಮಸ್ಯೆ ಎದುರಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಹಂತದಲ್ಲಿಯೇ ತಾವು ಮುಂದೆ ಏನಾಗಬೇಕೆಂಬ ಗುರಿ ಇಟ್ಟುಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ.ಒಲಂಪಿಕ್ಸ್ನಲ್ಲಿ ಪದಕ ಗೆದ್ದ ಬ್ಯಾಡ್ಮಿಂಟನ್ ಪಟು ಪಿ.ವಿ.ಸಿಂಧು 1ನೇ ತರಗತಿಯಿಂದಲೇ ಬ್ಯಾಡ್ಮಿಂಟನ್ ಆಟದಲ್ಲಿ ಆಸಕ್ತಿ ಮೂಡಿಸಿಕೊಂಡಿದ್ದರು.

ಕ್ರೀಡಾಪಟುಗಳಾದ, ಮೀರಾಬಾಯಿ ಚಾನು ತೂಕ ಎತ್ತುವುದರಲ್ಲಿ ನಿಸ್ಸೀಮರಾಗಿದ್ದರಿಂದ ಅವರ ಪ್ರತಿಭೆ ಗುರುತಿಸಲಾಯಿತು. ಯಾವುದೂ ಅಸಾಧ್ಯವಲ್ಲ. ಆದರೆ ಕೌಶಲ್ಯ ಹಾಗೂ ಸಾಧನೆಯ ಶ್ರಮ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಸಲು ಸಾಧ್ಯ. ಎಸ್‌ಎಸ್‌ಎಲ್‌ಸಿ ನಂತರ ಪ್ಯಾರಾಮೆಡಿಕಲ್ ಕೋರ್ಸ್ ಮಾಡಿಕೊಂಡರೆ ಉದ್ಯೋಗ ಕಟ್ಟಿಟ್ಟ ಬುತ್ತಿ. ಇದರಲ್ಲಿ ನರ್ಸಿಂಗ್, ಲ್ಯಾಬ್ ಟೆಕ್ನೀಷಿಯನ್, ಓಟಿ ಟೆಕ್ನೀಷಿಯನ್,ಎಕ್ಸ್-ರೇ, ಆಪ್ತಾಮಾಲಾಜಿಸ್ಟ್ ಮೊದಲಾದ ಕೋರ್ಸ್ಗಳಿವೆ. ಬಿಬಿಎಂಪಿ ಮೊದಲಾಗಿ ಮುನಿಸಿಪಲ್ ಕಚೇರಿಗಳಲ್ಲಿ ಆರೋಗ್ಯ ನಿರೀಕ್ಷಕರಾಗುವ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಇ.ಎಚ್.ಎಸ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಪ್ರಾಂಶುಪಾಲ ರಾಮಮೂರ್ತಿ,  ಅನಿಕೇತನ ಟ್ರಸ್ಟಿನ ಎನ್.ಎಂ.ನಟರಾಜ್, ಉಪನ್ಯಾಸಕ ಎಂ.ಸಿ.ಮಂಜುನಾಥ್, ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!