ಬೆಂ.ಗ್ರಾ.ಜಿಲ್ಲೆ: “ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹರಿಕಾರ ದಿವಂಗತ ದೇವರಾಜ್ ಅರಸು ಅವರ 106ನೇ ಜನ್ಮ ದಿನಾಚರಣೆ”ಯನ್ನು ಸರ್ಕಾರ ಹೊರಡಿಸಿರುವ ಕೋವಿಡ್-19 ನಿಯಮಗಳನ್ವಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸರಳವಾಗಿ ಆಚರಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ “ದೇವರಾಜ್ ಅರಸು ಅವರ 106ನೇ ಜನ್ಮ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸುವ ಪೂರ್ವ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ತಾಲ್ಲೂಕು ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ, ಸನ್ಮಾನಿಸಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ, ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸುನಿತಾ, ಹಿಂದುಳಿದ ವರ್ಗಗಳ ಒಕ್ಕೂಟದ ಸದಸ್ಯರುಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..