ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗಾಗಿ ಹಿಂದುಳಿದ ವರ್ಗಗಳಿಗೆ ಸೇರಿದ(ಪ್ರ.ವರ್ಗ-1, 2ಎ, 3ಎ ಮತ್ತು 3ಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಕಾನೂನು ಪದವೀಧರರಿಂದ/ ನ್ಯಾಯಾಂಗ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2021 ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ: 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..