ಉಡುಪಿ: ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕುಂದಾಪುರದ ಬಿಜಾಡಿಯ ಹರೀಶ್ ಬಂಗೇರ ಕೊನೆಗೂ ಬಿಡುಗಡೆಯಾಗಿದ್ದು, ಇಂದು ತಾಯ್ನಾಡಿಗೆ ಮರಳಿದ್ದಾರೆ.
ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ವ್ ಮಾಡಿದ್ದ ಆರೋಪದ ಮೇಲೆ ಹರೀಶ್ ಬಂಗೇರರನ್ನು 2019ರ ಡಿಸೆಂಬರ್ ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು.
ಈ ಬಗ್ಗೆ ಹರೀಶ್ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ಮೂಡುಬಿದಿರೆಯ ಅಬ್ದುಲ್ ಹುಯೇಸ್ ಮತ್ತು ಅಬ್ದುಲ್ ತುವೇಸ್ ಎಂಬವರನ್ನು ಬಂಧಿಸಿದ್ದರು.
ಈ ಅರೋಪಿಗಳು ಹರೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅದರಲ್ಲಿ ಸೌದಿ ದೊರೆ ಮತ್ತು ಮೆಕ್ಕಾದ ವಿರುದ್ಧ ಪೋಸ್ವ್ ಹಾಕಿ, ಅದರ ಸ್ಕ್ರೀನ್ ಶಾಟ್ ತೆಗೆದು ಅದನ್ನು ವೈರಲ್ ಮಾಡಿದ್ದರು ಮತ್ತು ನಂತರ ಈ ನಕಲಿ ಫೇಸ್ ಬುಕ್ ಖಾತೆಯನ್ನು ಡಿಲೀಟ್ ಮಾಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..