ಬೆಂ.ಗ್ರಾ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ / ಮೂರನೇ ಅಲೆ ತಡೆಗಟ್ಟಲು ಕೋವಿಡ್ ಪರೀಕ್ಷೆ ಹೆಚ್ಚಿಸಿ: ಸಚಿವ ಡಾ. ಕೆ.ಸುಧಾಕರ್

ಬೆಂ.ಗ್ರಾ.ಜಿಲ್ಲೆ:
ರಾಜ್ಯ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪಾಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹಾಗೂ ಲಸಿಕಾಕರಣ ಹೆಚ್ಚಿಸುವ ಮೂಲಕ ಕೋವಿಡ್-19 ಮೂರನೇ ಅಲೆ
ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು
ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವುದರಿಂದ, ಸೋಂಕು ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕೋವಿಡ್ ನಿಂದ ಗುಣಮುಖರಾದವರ ಪೈಕಿ ರಾಜ್ಯದಲ್ಲಿ 23 ಕ್ಷಯ ರೋಗ ಪತ್ತೆಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗಿರುವ 60,121 ಮಂದಿಗೂ ಕ್ಷಯಪರೀಕ್ಷೆ ಮಾಡಿಸುವುದರಿಂದ ಕ್ಷಯರೋಗವನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿಗದಿಪಡಿಸಿರುವ ಗುರಿಗಳನ್ವಯ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ವಿಳಂಬ ಮಾಡದೆ ವರದಿಗಳನ್ನು ನೀಡಿ, ಕೋವಿಡ್ ಸೋಂಕು ದೃಢ ಪಟ್ಟ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ ಬದಲು, ಹೋಂ ಐಸೋಲೇಶನ್ ಮಾಡಲು ಗ್ರಾಮಾಂತರ ಪ್ರದೇಶದಲ್ಲಿ ಸೌಲಭ್ಯಗಳ ಕೊರತೆ ಇರುವುದರಿಂದ ವೈದ್ಯರ ಸಲಹೆ ಮೇರೆಗೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ದಾಖಲಿಸಬೇಕು ಎಂದರಲ್ಲದೆ, ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾದ್ದಲ್ಲಿ, ಮೈಕ್ರೋ ಕಂಟೈನ್ಮೆಂಟ್ ವಲಯ ಮಾಡಬೇಕು ಎಂದರು.

ರಾಜ್ಯದಲ್ಲಿ ಶೀಘ್ರವೇ ಮಕ್ಕಳಿಗಾಗಿಯೇಆರೋಗ್ಯ ನಂದನಎಂಬ ವಿಶೇಷ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ರಾಜ್ಯದಲ್ಲಿರುವ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ, ಅಪೌಷ್ಟಿಕತೆ, ರಕ್ತಹೀನತೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆರೈಕೆ, ಕಾಳಜಿ ಹಾಗೂ ಚಿಕಿತ್ಸೆ ನೀಡುವ ಮೂಲಕ ಮಕ್ಕಳಿಗೆ ಕೋವಿಡ್ ಮೂರನೇ ಅಲೆ ಪರಿಣಾಮಕಾರಿಯಾಗದಂತೆ ತಡೆಯಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಿಸಲಾಗುವುದು. ಅಲ್ಲದೇ ಹೊಸಕೋಟೆ ತಾಲ್ಲೂಕಿಗೆ ತಾಯಿ ಮತ್ತು ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ತಾಲ್ಲೂಕಿನಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಗೆ ಈಗಾಗಲೇ 29 ವೈದ್ಯರನ್ನು ನೇಮಕ ಮಾಡಲಾಗಿದ್ದು, ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಹಾಗೂ ಪ್ರತಿ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಸೇವೆಯ ಬಗ್ಗೆ ಪರಿಶೀಲನೆ ನಡೆಸಬೇಕು ಮತ್ತು ಅಲ್ಲಿನ ಮೂಲಭೂತ ಸೌಕರ್ಯ ಹಾಗೂ ಸೇವೆಯ ಬಗ್ಗೆ ಮಾಹಿತಿ ದಾಖಲಿಸಬೇಕು ಎಂದು ಹೇಳಿದರು.

ಡಿಸೆಂಬರ್ ಅಂತ್ಯಕ್ಕೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 4,20,360 ಮೊದಲ ಡೋಸ್, 1,20,756 ಎರಡನೇ ಡೋಸ್ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಲಸಿಕೆ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಆಗಸ್ಟ್ 23ರಿಂದ ಶಾಲಾಕಾಲೇಜುಗಳು ಪ್ರಾರಂಭವಾಗಲಿದ್ದು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದರಲ್ಲದೆ, ಮಕ್ಕಳ ಆರೋಗ್ಯವೂ ಮುಖ್ಯವಾಗಿರುವುದರಿಂದ ಆರೋಗ್ಯ ಇಲಾಖೆ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದರಲ್ಲದೆ, ಮಾರುಕಟ್ಟೆ, ಮದುವೆ, ಜಾತ್ರೆ, ಸಭೆಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಕ್ರಮ
ವಹಿಸಬೇಕು ಹಾಗೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿಮಾತನಾಡಿ, ಕೋವಿಡ್ ಲಸಿಕೆ ಪಡೆಯಲು ಪ್ರಾರಂಭದಲ್ಲಿ ಹಿಂದೇಟು ಹಾಕುತ್ತಿದ್ದ ಜನರು, ಪ್ರಸ್ತುತ ಲಸಿಕೆ ಪಡೆಯಲು ಹೆಚ್ಚು ಮಂದಿ ಆಗಮಿಸುತ್ತಿದ್ದು, ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದರು.

ಸಭೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ .ದೇವೇಗೌಡ, ಜಿಲ್ಲಾಧಿಕಾರಿ
ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಸೇರಿದಂತೆ
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ
ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ.
ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ

“ಮೇಕೆದಾಟು (Mekedatu) ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="116123"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!