ಬೆಂ.ಗ್ರಾ.ಜಿಲ್ಲೆ:
ಕೋವಿಡ್ -19 ಲಸಿಕೆಗಳನ್ನು ದೇವನಹಳ್ಳಿಯಲ್ಲಿ ಸಾರ್ವಜನಿಕರಿಗೆ ವ್ಯವಸ್ಥಿತವಾಗಿ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.48.5% ರಷ್ಟು ಮೊದಲ ಹಂತದ ಕೋವಿಡ್ ಲಸಿಕಾ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ಕೋವಿಡ್-19
ಮೂರನೇ ಅಲೆಯ ಎಚ್ಚರಿಕೆಯ ಹಿನ್ನಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿರುವ ಕೋವಿಡ್-19 ಲಸಿಕಾ ಕೇಂದ್ರಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಮೊದಲ
ಹಂತದ ಕೋವಿಡ್ ಲಸಿಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.
48.5% ರಷ್ಟು ಮತ್ತು ರಾಜ್ಯದಲ್ಲಿ ಶೇ. 50% ಕ್ಕಿಂತ ಹೆಚ್ಚು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 28.73ರಷ್ಟು ಮತ್ತು ರಾಜ್ಯದಲ್ಲಿ ಶೇ.18-20% ರಷ್ಟು ಎರಡನೇ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದರು.
ರಾಜ್ಯದಲ್ಲಿ
ಕೋವಿಡ್ ಲಸಿಕೆಗಳು ಕೊರತೆಯಾಗದ ರೀತಿಯಲ್ಲಿ ನಿರಂತರವಾಗಿ ಲಸಿಕೆ ಸರಬರಾಜು ಮಾಡುವಂತೆ ಕ್ರಮ ವಹಿಸಲಾಗಿದ್ದು, ಜನರಿಗೆ ತೊಂದರೆಯಾಗದ
ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆಗಸ್ಟ್ 23 ರಿಂದ ಶಾಲೆಗಳು
ಪ್ರಾರಂಭವಾಗುತ್ತಿರುವ ಹಿನ್ನೆಲೆ, ಆರೋಗ್ಯ ಇಲಾಖೆಯು ಕೋವಿಡ್ ಮಾರ್ಗಸೂಚಿಗಳನ್ನು ಶಿಕ್ಷಣ ಇಲಾಖೆಗೆ ಕಳುಹಿಸಿಕೊಡಲಾಗಿದ್ದು, ಅದರಂತೆ ಸಿದ್ಧತೆಗಳು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು
ಈ
ಸಂದರ್ಭದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ),
ದೇವನಹಳ್ಳಿ ಪುರಸಭೆ ಅಧ್ಯಕ್ಷೆ ಜಿ.ರೇಖಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್,
ದೇವನಹಳ್ಳಿ ತಹಶೀಲ್ದಾರ್ ಅನಿಲ್ ಕುಮಾರ್ ಆರಳೋಕರ್, ಮಾಜಿ ಶಾಸಕರಾದ ಚಂದ್ರಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುದ್ರೇಶ್, ದೇವನಹಳ್ಳಿ ಬಿಜೆಪಿ ಕಾರ್ಪೊರೇಟರ್ ಗಳಾದ ಅಂಬರೀಶ್ ಮತ್ತು ವಿಜಿ, ದೇವನಹಳ್ಳಿ ಮುಖ್ಯಾಧಿಕಾರಿ
ನಾಗರಾಜು, ದೇವನಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಲಯನ್ಸ್
ಕ್ಲಬ್ ನ ಸದಸ್ಯರು,
ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಪೋಲಿಸ್ ಸಿಬ್ಬಂದಿಗಳು, ಸೇವಾ ಭಾರತಿ ಸ್ವಯಂ ಸೇವಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ
ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ.
ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..