ಕೋವಿಡ್ ನಿಯಮಗಳ ಪಾಲನೆಯೊಂದಿಗೆ 9ಮತ್ತು 10ನೇ ತರಗತಿಗಳನ್ನು ಆರಂಭಿಸಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಶಾಲೆಗಳನ್ನು ಆಗಸ್ಟ್ 23 ರಿಂದ ಆರಂಭಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅಗತ್ಯ ಸೂಚನೆಗಳನ್ನು ನೀಡಿದರು. 

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗದಲ್ಲಿ  ಗುರುವಾರ 9 ಮತ್ತು 10ನೇ ತರಗತಿಗಳ ಶಾಲೆಗಳನ್ನು ಆರಂಭಿಸುವ ಬಗ್ಗೆ ಪೂರ್ವ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಗಸ್ಟ್ 23 ರಿಂದ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಫ್ರೌಢಶಾಲೆಗಳಲ್ಲಿನ 9 ಮತ್ತು 10ನೇ ತರಗತಿಗಳನ್ನು ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಕಡ್ಡಾಯವಾಗಿರುತ್ತದೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರು/ ಉಪಹಾರ ತರಬೇಕು. ಶಾಲೆಗಳಲ್ಲಿಯೂ ಸಹ ಕುಡಿಯಲು ಬಿಸಿ ನೀರಿನ ವ್ಯವಸ್ಥೆಯನ್ನು  ಆಯಾ ಶಾಲಾ ಮುಖ್ಯಸ್ಥರು ವ್ಯವಸ್ಥೆ ಮಾಡಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಚಿಸದವರು ಆನ್ ಲೈನ್ ತರಗತಿಗಳನ್ನು ಮುಂದುವರಿಸಬಹುದು. ಭೌತಿಕ ಹಾಜರಾತಿ ಕಡ್ಡಾಯವಲ್ಲ ಎಂದರು.

ಭೌತಿಕ ತರಗತಿಗಳಿಗೆ  ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಈ ಬಗ್ಗೆ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ನಿಗಾವಹಿಸಬೇಕು.  ಶಾಲೆಗಳಲ್ಲಿರುವ ಶೌಚಾಲಯಗಳನ್ನು ಪ್ರತಿ ದಿನ ಸ್ವಚ್ಚಗೊಳಿಸಲು ವ್ಯವಸ್ಥೆ ಮಾಡಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು, ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಒಟ್ಟಾರೆ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು  ಪಾಲಿಸಬೇಕು. ಶಿಕ್ಷಕರು/ಸಹಾಯಕ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಲಸಿಕೆ ಹಾಕಿಸಿಕೊಳ್ಳದ  ಅಧಿಕಾರಿ/ಸಿಬ್ಬಂದಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವಂತೆ ಉಪನಿರ್ದೇಶಕರಿಗೆ ತಿಳಿಸಿದರು. ಇದೇ ಮಾದರಿಯಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣವನ್ನು ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಅಧಿಕಾರಿಯವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. 

ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಿದರು. 

ಶಾಲಾ ಕಾಲೇಜುಗಳನ್ನು ತೆರೆಯುವ ಮುನ್ನ  ಕೊಠಡಿಗಳಿಗೆ ಕಡ್ಡಾಯವಾಗಿ  ಸ್ಯಾನಿಟ್ಯಸ್ ಮಾಡಲು ವ್ಯವಸ್ಥೆ ಮಾಡಬೇಕು .ಶಾಲೆ ಆರಂಭವಾದ ನಂತರ ಯಾವುದಾದರೂ ಶಾಲೆಯಲ್ಲಿ   ಎರಡಕ್ಕಿಂತ ಹೆಚ್ಚಿನ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದಲ್ಲಿ  ಅಂತಹ ಶಾಲೆಗಳನ್ನು 1ವಾರ   ರಜೆ  ಮಾಡಿ ಆ  ಶಾಲಾ ಕೊಠಡಿಗಳಿಗೆ ಸ್ಯಾನಿಟೈಸ್  ಮಾಡಬೇಕು. ಆನಂತರವೇ ಅಂತಹ ಶಾಲೆಗಳನ್ನು ಪುನರಾರಂಭ ಮಾಡಬೇಕು ಎಂದರು. ಈ ವೇಳೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!