ಕ್ರಿಯಾ ಯೋಜನೆ ಸಲ್ಲಿಕೆಗೆ ಗಡುವು ನೀಡಿದ ಸಂಸದ ಬಿ.ಎನ್.ಬಚ್ಚೇಗೌಡ

ಬೆಂ.ಗ್ರಾ.ಜಿಲ್ಲೆ: ಹೊಸಕೋಟೆ ತಾಲ್ಲೂಕಿನ ಗಣಗಲೂರು ಗ್ರಾಮ ಪಂಚಾಯಿತಿಯನ್ನು ಸಂಸದ ಆದರ್ಶ ಗ್ರಾಮವನ್ನಾಗಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಗೂ ಹೊಸಕೋಟೆ ತಾಲ್ಲೂಕಿನ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಯೋಜನೆಗಳು ಹಾಗೂ ಐ.ಇ.ಸಿ ಚಟುವಟಿಕೆಗಳ ಅಡಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿ ಯೋಜನೆ(ವಿ.ಡಿ.ಪಿ)ಯ ಕ್ರಿಯಾ ಯೋಜನೆ ತಯಾರಿಸಿ, ಆಗಸ್ಟ್ 31 ರೊಳಗೆ ಸಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ ಅವರು ತಿಳಿಸಿದ್ದಾರೆ‌.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗಣಗಲೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿ ಯೋಜನೆಯನ್ನು(ವಿ.ಡಿ.ಪಿ) ತಯಾರಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಸಂಸದ ಆದರ್ಶ ಗ್ರಾಮವನ್ನು ಯಶಸ್ವಿಯಾಗಿ ಅಭಿವೃದ್ಧಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಎಂದರಲ್ಲದೆ, ಇಲಾಖಾ ಯೋಜನೆಗಳನ್ನು ಗ್ರಾಮದಲ್ಲಿ ವ್ಯವಸ್ಥಿತವಾಗಿ ಅನುಷ್ಠಾನ ಮಾಡುವುದರ ಮೂಲಕ ಒಂದು ವರ್ಷದಲ್ಲಿ ಗ್ರಾಮದ ಸಂಪೂರ್ಣ ಚಿತ್ರಣ ಬದಲಾಗಲು ಹಾಗೂ ಆಧುನಿಕ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ, ರಸ್ತೆ ದುರಸ್ತಿ, ಸಾಕ್ಷರತೆ ಪ್ರಮಾಣ ಕುಂಠಿತ, ನಿರುದ್ಯೋಗ, ನೈರ್ಮಲ್ಯದ ಕೊರತೆ, ಅನಾರೋಗ್ಯದ ಸಮಸ್ಯೆ, ಅವೈಜ್ಞಾನಿಕ, ವೈದ್ಯಕೀಯ ಸೌಲಭ್ಯದ ಕೊರತೆ, ಸಾರಿಗೆ ಸಂಪರ್ಕದ ಸಮಸ್ಯೆ ಹೀಗೆ ಹತ್ತು ಹಲವಾರು ಮೂಲ ಸೌಕರ್ಯಗಳ ಸಮಸ್ಯೆಗಳಿದ್ದು, ಅವುಗಳನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾರಾಟದಂತಹ ಕೃತ್ಯಗಳು ಜರುಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರಲ್ಲದೆ, ಕೋವಿಡ್-19 ಮೂರನೇ ಅಲೆಯನ್ನು ಬರದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಕೊರೋನಾ ವೈರಸ್ ಹರಡದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಮಾತನಾಡಿ, ಪ್ರತಿಯೊಂದು ಇಲಾಖೆಯು ಗಣಗಲೂರು ಗ್ರಾಮ ಪಂಚಾಯತಿಯಲ್ಲಿ ಒಂದೊಂದು ಯೋಜನೆಯನ್ನು ತಂದು, ಅನುಷ್ಠಾನಗೊಳಿಸುವುದರ ಮೂಲಕ ಸಂಸದ ಆದರ್ಶ ಗ್ರಾಮ ಪರಿಕಲ್ಪನೆ ಸಕಾರಗೊಳಿಸಬೇಕಿರುವ ಹಿನ್ನೆಲೆ, ಮುಂದಿನ ಬಾರಿ ಸಭೆಗೆ ಹಾಜರಾಗುವ ವೇಳೆ, ಇಲಾಖೆವಾರು ಕೈಗೊಂಡಿರುವ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಯು ಒಂದು ವರ್ಷದೊಳಗೆ ಆಧುನಿಕ ಮೂಲಭೂತ ಸೌಕರ್ಯಗಳನ್ನು ಹೊಂದಬೇಕು. ಆಶ್ರಯ ಮನೆ ಯೋಜನೆಯಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ 17 ಮನೆಗೆ ನೀರಿನ ವ್ಯವಸ್ಥೆ, 25 ಮನೆಗೆ ಶೌಚಾಲಯ ನಿರ್ಮಾಣವಾಗಬೇಕು, ಬಾಕಿ ಉಳಿದಿರುವ ಪಿಂಚಣಿ ಸೌಲಭ್ಯ, ಆಧಾರ್ ಕಾರ್ಡ್, ಜಾಬ್ ಕಾರ್ಡ್, ಆಯುಷ್ಮಾನ್ ಗುರುತಿನ ಚೀಟಿ, ಪೌತಿ ಖಾತೆ ಮಾಡಿಸಿಕೊಡಬೇಕು ಹಾಗೂ ಕಾರ್ಮಿಕರು ಕೆಲಸದ ಸಮಯದಲ್ಲಿ ಗಾಯಗೊಂಡರೆ ರೂ. 2 ಲಕ್ಷ,  ನಿಧನಗೊಂಡಲ್ಲಿ, ರೂ. 5 ಲಕ್ಷ ಪರಿಹಾರ ನೀಡುವ ಮೂಲಕ‌ ಕಾರ್ಮಿಕರ ಹಿತರಕ್ಷಣೆ ಕಾಪಾಡಬೇಕೆಂದು ತಿಳಿಸಿದರು.

ಕೋವಿಡ್ ಮೂರನೇ ಅಲೆಯೂ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಮಾಹಿತಿಯ ಹಿನ್ನೆಲೆ, ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪೌಷ್ಟಿಕಾಂಶ ಆಹಾರ ಒದಗಿಸಬೇಕು ಎಂದರು.

ಪ್ರತಿಯೊಂದು ಇಲಾಖೆಯು ಸರ್ಕಾರದ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ಮಟ್ಟದಿಂದ ಸಾರ್ವಜನಿಕರ ಮನೆ ಬಾಗಿಲಿಗೆ ಪ್ರಮಾಣಿಕವಾಗಿ ತಲುಪಿಸುವ ಪ್ರಯತ್ನ ಮಾಡುವ ಮೂಲಕ ಆದರ್ಶ ಗ್ರಾಮದಡಿ ಆಯ್ಕೆಗೊಂಡಿರುವ ಗ್ರಾಮದ ಸ್ವರೂಪ ಬದಲಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್. ರವಿಕುಮಾರ್  ಅವರು ಮಾತನಾಡಿ ಗಣಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 8 ಗ್ರಾಮಗಳಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದ್ದು, ಇದಕ್ಕೆ ಪೂರಕವಾಗಿ ಆಯಾ ಇಲಾಖೆ ಅಡಿಯಲ್ಲಿ ಬರುವ ಯೋಜನೆಗಳ ಸೌಲಭ್ಯಗಳನ್ನು ಬಗ್ಗೆ ಪಟ್ಟಿ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 101 ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಜಾಗ ಮಂಜೂರಾಗಿದೆ, ಒಟ್ಟು 54 ತ್ಯಾಜ್ಯ ವಿಲೇವಾರಿ ಘಟಕಗಳ ಕಾಮಗಾರಿ ಪೂರ್ಣಗೊಂಡಿದ್ದು, 44 ದ್ರವ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಸ್ಥಳ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರಲ್ಲದೆ, ಒಣಕಸ, ಹಸಿಕಸ ಬೇಪರ್ಡಿಸಿ ಹಸಿಕಸವನ್ನು ಹಿಂದಿರುಗಿಸಿ, ತಮ್ಮ ಹೊಲಗಳಿಗೆ ಅಗತ್ಯವಿರುವ ಗೊಬ್ಬರ ತಯಾರಿಕೆಗೆ ಬಳಸಿಕೊಳ್ಳಲು ತಿಳಿಸಲಾಗುವುದು ಹಾಗೂ ಒಣಕಸವನ್ನು ವಿಲೇವಾರಿ ಮಾಡಲಾಗುವುದು ಎಂದರು.

ಶುದ್ಧ ಕುಡಿಯುವ ನೀರು ಒದಗಿಸುವುದು ಇಲಾಖೆಯ ಜವಾಬ್ದಾರಿಯಾಗಿದ್ದು, ಇದರೊಂದಿಗೆ ಚರಂಡಿ, ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಬೇಕು ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣೆ ನಡೆಸಿ, ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಿ, ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚಿಸಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 395 ಮಕ್ಕಳು ಶಾಲೆಗೆ ದಾಖಲಾಗಿ ಹೊರಗುಳಿದಿದ್ದು, ಇನ್ನೂ 192 ಮಕ್ಕಳು ಶಾಲೆಗೆ ದಾಖಲಾಗಿರುವುದಿಲ್ಲ ಎಂದರಲ್ಲದೆ, ಗಣಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಶಾಲೆಗೆ ಕರೆ ತರಬೇಕು ಹಾಗೂ ಗ್ರಾಮ ಪಂಚಾಯಿತಿಯ ಕ್ರಿಯಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಹೊಸಕೋಟೆ ತಹಶೀಲ್ದಾರ್ ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ  ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!