ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ “ಡಿ.ದೇವರಾಜ್ ಅರಸು” ಅವರ 106ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
“ಡಿ.ದೇವರಾಜ್ ಅರಸು” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪುಷ್ಪನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ, ಮತ್ತಿತ್ತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..