ದೇಶಕ್ಕೆ ಸಮಗ್ರ ಮೀಸಲಾತಿ ವ್ಯವಸ್ಥೆ ಜಾರಿ ಅಗತ್ಯ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಹಾವೇರಿ: ದೇಶಕ್ಕೆ ಸಮಗ್ರವಾದ ಮೀಸಲಾತಿ ವ್ಯವಸ್ಥೆ ಜಾರಿಗೊಳಿಸುವುದು ಅಗತ್ಯವಾಗಿದೆ ಎಂದು  ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ  ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದ್ದಾರೆ.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಸಮಗ್ರ ಜಾತಿಗಣತಿ ನಡೆಸಬೇಕಾಗಿದೆ. 1931 ರ ನಂತರ ಜಾತಿಗಣತಿ ನಡೆದಿರುವುದಿಲ್ಲ. ಈ ಕಾರಣಕ್ಕಾಗಿ ದೇಶಾದ್ಯಂತ ಸಮಗ್ರ ಜಾತಿಗಣತಿ ನಡೆಸಿದರೆ ಸಾಮಾಜಿಕ ನ್ಯಾಯದಡಿ ಹಿಂದುಳಿದ ವರ್ಗ ಸೇರಿದಂತೆ ಎಲ್ಲ ಸಮುದಾಯಕ್ಕೂ ಮೀಸಲಾತಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರ-ವಿರೋಧದ ಚರ್ಚೆ ನಡೆಯುತ್ತಿದ್ದು,  ಸಮಾಜದ ಜೊತೆಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಬೇಕಾಗಿದೆ, ಸದನದಲ್ಲಿ  ಮಂಡಿಸಿ ಪಕ್ಷಬೇಧಮರೆತು ಬಹುಮತ ಸಿಗಬೇಕಾಗಿದೆ. ಮೂರು ಸಾವಿರಕ್ಕೂ ಅಧಿಕ ಜಾತಿಗಳಿವೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತೀರ್ಮಾನಗಳನ್ನು ಕೈಗೊಳ್ಳಬೇಕಾಗಿದೆ. ಸದಾಶಿವ ಆಯೋಗದ ವರದಿಯ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಮುಕ್ತಮನಸ್ಸಿನಿಂದ ಚರ್ಚಿಸಲಾಗುವುದು ಎಂದರು.

ಚುನಾವಣೆ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಜನರಬಳಿ ತೆಗೆದುಕೊಂಡು ಹೋಗಿ ವೋಟು ಪಡೆಯುವ ಬದಲು ಸಮಾಜದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ ಮತ ಕೇಳುವುದು ಒಳಿತು. ಸಂಸತ್ತಿನಲ್ಲಿ ನೂತನ ಸಚಿವರ ಪರಿಚಯಮಾಡಿಕೊಳ್ಳಲು ಅವಕಾಶವಾಗದ ಕಾರಣ ಜನಾಶೀರ್ವಾದದ ಮೂಲಕ ಜನರ ಬಳಿಹೋಗಿ ಪರಿಚಯಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದಲ್ಲಿ ಎಲ್ಲರೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾದುದು ಇಂದಿನ ಅಗತ್ಯವಾಗಿದೆ ಎಂದರು. 

ಹಾವೇರಿಯಲ್ಲಿ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ, ಆದರೆ ಇಂದು ಸ್ವಾತಂತ್ರ್ಯಯೋಧ ಮೈಲಾರ ಮಹದೇವಪ್ಪ ಅವರ ವೀರಸೌಧಕ್ಕೆ ಭೇಟಿ ನೀಡಿದ್ದು ವಿಶೇಷವಾಗಿತ್ತು ಎಂದರು.

ಪೆಟ್ರೋಲ್ ದರ ಏರಿಕೆ ಕುರಿತು ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಪೆಟ್ರೋಲ್ ಬಳಕೆಯನ್ನು ನಿರ್ಬಂಧಿಸುವ ಯೋಜನೆ ಹೊಂದಲಾಗಿದೆ. ಈಗಾಗಲೇ ಇಲೆಕ್ಟ್ರಿಕಲ್ ವಾಹನ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲಲಿ  ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಇಳಿಕೆ ಕುರಿತು  ಸರ್ಕಾರ ಚಿಂತನೆ ಮಾಡುತ್ತಿದೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಶಾಸಕರು, ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ, ಸಿದ್ಧರಾಜ ಕಲಕೋಟಿ, ಪರಮೇಶ್ವರಪ್ಪ ಮೆಗಳಮನಿ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!