ದೊಡ್ಡಬಳ್ಳಾಪುರ: ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿರುವ ಶ್ರೀ ಪರಿಪೂರ್ಣ ಸನಾತನ ಚಾರಿಟಬಲ್ ಟ್ರಸ್ಟಿನ ನಿತ್ಯ ಅನ್ನ ದಾಸೋಹ ಕ್ಕೆ ತರಕಾರಿಗಳನ್ನು ನೀಡುವ ಮೂಲಕ ಹ್ಯೂಮನ್ ರೈಟ್ಸ್ ಪ್ರೋಟೆಕ್ಷನ್ ಕಮಿಟಿ (RTPWT) ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದೆ.
ಶುಕ್ರವಾರ ಪರಿಪೂರ್ಣ ಸನಾತನ ಚಾರಿಟಬಲ್ ಟ್ರಸ್ಟ್ಗೆ ತೆರಳಿದ ಹ್ಯೂಮನ್ ರೈಟ್ಸ್ ಪ್ರೋಟೆಕ್ಷನ್ ಕಮಿಟಿ ಸದಸ್ಯರು, ಅನ್ನದಾಸೋಹಕ್ಕೆ ತರಕಾರಿ ನೀಡಿಲ್ಲದೆ, ಹಬ್ಬದ ಪ್ರಯುಕ್ತ ಮಕ್ಕಳಿಗೆ ಸಿಹಿ ನೀಡಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಕಮಿಟಿಯ ರಾಜ್ಯ ಸದಸ್ಯ ನವೀನ್ ಕುಮಾರ್.ಕೆ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಅರವಿಂದ್, ಸಂಚಾಲಕ ಚೆನ್ನಕೇಶವ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..