ಬೆಂಗಳೂರು: ಕೋವಿಡ್ 19 ಸಾಂಕ್ರಾಮಿಕವನ್ನು ನಿಯಂತ್ರಣದಲ್ಲಿಡಲು ಕೋವಿಡ್ ನಿಯಮ ಹಾಗೂ ಮಾರ್ಗಸೂಚಿಗಳನ್ನು ಜನತೆ ಕಡ್ಡಾಯವಾಗಿ ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಜನರು ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಸ್ವಯಂ ಪ್ರೇರಿತವಾಗಿ ನಡೆದುಕೊಳ್ಳಬೇಕು. ಕೋವಿಡ್ ಆರ್ಥಿಕ, ಶೈಕ್ಷಣಿಕ ಚಟುವಟಿಕೆಗಳ ದೃಷ್ಟಿಯಿಂದ ನಿರ್ಬಂಧಗಳು ಮುಂದುವರೆಯುತ್ತವೆ. ಜನರು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……