ದೊಡ್ಡಬಳ್ಳಾಪುರ: ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ ನೇತೃತ್ವದಲ್ಲಿ ಶಿಕ್ಷಣ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅದಾಲತ್ ನಲ್ಲಿ ಸುಮಾರು 47 ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಿಲಾಗಿದ್ದು, ಉಳಿದ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪರಹರಿಸಲಾಗುವುದೆಂದು ತಿಳಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಎಸ್.ವಿ.ವಸಂತ್ ಗೌಡ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಎಸ್.ರಾಜಶೇಖರ ಸೇರಿದಂತೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ನಾಮನಿರ್ದೇಶಿತ ಸದಸ್ಯರು ಮತ್ತು ಸದಸ್ಯರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..