ಚಿಕ್ಕಬಳ್ಳಾಪುರ: ಅರಣ್ಯ ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ವಿ.ಕತ್ತಿ ಅವರು ಶುಕ್ರವಾರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿವಿಧೆಡೆ ಪ್ರವಾಸ ಕೈಗೊಂಡು, ಅರಣ್ಯ ಇಲಾಖೆಯಿಂದ ಕೈಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಮೊದಲಿಗೆ ಗೌರಿಬಿದನೂರು ಸಮೀಪದ ಹಿರೇಬಿದನೂರು ಗ್ರಾಮದಲ್ಲಿರುವ ಸರ್ಕಾರಿ ಎನ್.ಬಿ.ಎಂ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿ ಅರಣ್ಯ ಇಲಾಖೆಯಿಂದ ಕೈಗೊಂಡಿರುವ ಅರಣ್ಯೀಕರಣ ಹಾಗೂ ಬಿದುರು ಸಸ್ಯೋಧ್ಯಾನವನ್ನು ಪರಿಶೀಲಿಸಿದರು. ಇದೇ ವೇಳೆ ಜಿಲ್ಲೆಯಾದ್ಯಂತ ಖಾಲಿ ಇರುವ ಅರಣ್ಯ ಭೂಮಿ ಹಾಗೂ ಇತರೆ ಸರ್ಕಾರಿ ಜಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡ ಮರಗಳನ್ನು ಬೆಳೆಸಿ ಅರಣ್ಯವನ್ನು ಅಭಿವೃದ್ಧಿ ಪಡಿಸಬೇಕು ಎಂದು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅಲ್ಲಿಂದ ತಾಲೂಕಿನ ಕುರೂಡಿ ಗ್ರಾಮಕ್ಕೆ ತೆರಳಿದ ಅವರು, ಅಲ್ಲಿ ಅರಣ್ಯ ಇಲಾಖೆಯ ಸಸ್ಯಾಗಾರ ಮತ್ತು ಅರಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ತದನಂತರ ತಾಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ರೈತನೊರ್ವ ತಮ್ಮ ಜಮೀನಿನಲ್ಲಿ ಬೆಳೆದಿರುವ ಕರ್ಜೂರ ಬೆಳೆಯನ್ನು ಪರಿಶೀಲಿಸಿ, ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರಸಲನ್, ತಹಸೀಲ್ದಾರ್ ಶ್ರೀನಿವಾಸ್, ಆಹಾರ, ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……