ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ, ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯು ಆಯಾ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಗಸ್ಟ್ 23 ರಿಂದ 27 ರವರೆಗೆ ಪ್ರತಿದಿನ ಮಧ್ಯಾಹ್ನ 12:00 ನಡೆಯಲಿದೆ.
2021ರ ಆಗಸ್ಟ್ 23 ರಂದು ನೆಲಮಂಗಲ ತಾಲ್ಲೂಕು, ಆಗಸ್ಟ್ 25 ರಂದು ದೇವನಹಳ್ಳಿ ತಾಲ್ಲೂಕು, ಆಗಸ್ಟ್ 26 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಹಾಗೂ ಆಗಸ್ಟ್ 27 ರಂದು ಹೊಸಕೋಟೆ ತಾಲ್ಲೂಕಿನಲ್ಲಿ ನಡೆಯಲಿದೆ.
ಸಾರ್ವಜನಿಕರು ತಮ್ಮ ಕುಂದುಕೊರತೆಯೊಂದಿಗೆ ಈ ಸಭೆಯಲ್ಲಿ ಭಾಗವಹಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..