ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು, “ಬ್ರಹ್ಮಶ್ರೀ ನಾರಾಯಣ ಗುರು” ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
“ಬ್ರಹ್ಮಶ್ರೀ ನಾರಾಯಣ ಗುರು” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪುಷ್ಪನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ.ಬಿ.ಆರಾಧ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವಲೋಚನಾ, ಆರ್.ಹೆಚ್.ಎಂ.ಗಂಗಾಧರಪ್ಪ ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ, ಮತ್ತಿತ್ತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..