ದೊಡ್ಡಬಳ್ಳಾಪುರ: ಇಂದಿನಿಂದ 9-12ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕೆ ತರಗತಿಗಳು ಆರಂಭವಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿಗಳನ್ನು ಆರಂಭ ಮಾಡಲಾಗಿದೆ.
ತಾಲೂಕಿನಲ್ಲಿ ತರಗತಿಗಳ ಆರಂಭಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಶೇ.80ಕ್ಕು ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡುತ್ತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಈ ವೇಳೆ ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದ ಅನ್ವಯ ಶಾಲೆಗಳ ಆರಂಭಕ್ಕೆ ತಾಲೂಕಿನಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳಿಗೆ ಹಾಜರಾಗಿದ್ದು, ಹಾಜರಾತಿ ಅಂಕಿ ಅಂಶ ವರದಿ ಬಂದ ನಂತರ ನೀಡಲಾಗುವುದು ಎಂದು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..