9-12ನೇ ತರಗತಿಗಳ ಆರಂಭ: ವಿವಿಧ ಸರ್ಕಾರಿ ಶಾಲೆಗಳಿಗೆ ಸಚಿವ ಡಾ.ಕೆ.ಸುಧಾಕರ್ ಭೇಟಿ, ಸಿದ್ಧತೆಗಳ ಪರಿಶೀಲನೆ

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹಲವು ದಿನಗಳ ಬಳಿಕ 9 ರಿಂದ 12 ತರಗತಿಗಳು ಸೋಮವಾರದಿಂದ ಆರಂಭಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ನಗರದ ವಿವಿಧ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ, ಕೊರೊನಾ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೊದಲಿಗೆ ನಗರದ ಬಿಬಿ ರಸ್ತೆಯಲ್ಲಿರುವ ಜೂನಿಯರ್ ಕಾಲೇಜು ಆವರಣದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಶಾಲೆಯಲ್ಲಿ ಕೈಗೊಂಡಿರುವ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿ ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ನಿರ್ಭಯವಾಗಿ ಶಾಲೆಗಳಿಗೆ ಬರಬಹುದು ಎಂದು ನೈತಿಕ ಸ್ಥೈರ್ಯ ತುಂಬಿದರು.

ನಂತರ ನಗರದ ವಾಪಸಂದ್ರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಸಚಿವರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕರೊನಾ ಹೊಡೆತದಿಂದ ಅನೇಕ ಕ್ಷೇತ್ರಗಳಿಗೆ ಅಪಾರ ನಷ್ಟ ಉಂಟಾಗಿದೆ. ಅದೇ ರೀತಿಯಾಗಿ ದೇಶದ ಅಭಿವೃದ್ಧಿ ವಿಚಾರದಲ್ಲಿ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರಕ್ಕೂ ಕೂಡ ತುಂಬಲಾರದ ನಷ್ಟ ಉಂಟಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಆರೋಗ್ಯದ ಜತೆಗೆ ಅವರ ಶೈಕ್ಷಣಿಕ ಬದುಕನ್ನು ರೂಪಿಸುವುದೂ ಕೂಡ ಸರ್ಕಾರದ ಮುಖ್ಯ ಜವಾಬ್ಧಾರಿಯಾಗಿದೆ. ಈ ನಿಟ್ಟಿನಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಕೋವಿಡ್ -19 ಅನ್ನು ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ತಂದು ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಪ್ರಸ್ತುತ 9 ರಿಂದ 12ನೇ ತರಗತಿಯವರಿಗೆ ತರಗತಿಗಳನ್ನು ಆರಂಭಿಸಲಾಗಿದೆ ಎಂದರು.

 ಪ್ರಾರಂಭದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಯಿತು. ಅದಾದ ಬಳಿಕ ಹಂತಹಂತವಾಗಿ ಉನ್ನತ ಶಿಕ್ಷಣಕ್ಕೆ ಅನುವು ಮಾಡಿಕೊಡಲಾಯಿತು. ಇದೀಗ 9 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢವಾಗಬೇಕು ಎಂಬುದರ ಬಗ್ಗೆ ಮಕ್ಕಳಿಗೆ ನೈತಿಕ ಸ್ಫೂರ್ತಿ ತುಂಬುವ ಉದ್ದೇಶದಿಂದ ಶಾಲೆಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಪ್ರಸ್ತುತ ಒಂದು ತರಗತಿಯಲ್ಲಿ ಗರಿಷ್ಠ 20 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯಿಂದಲೇ ಎಲ್ಲಾ ರೀತಿಯ ಮಾರ್ಗಸೂಚಿಗಳನ್ನು ನೀಡಲಾಗಿದೆ. ಶಿಕ್ಷಣ ಇಲಾಖೆ ಅದನ್ನು ಯಥಾವತ್ತಾಗಿ ಪಾಲನೆ ಮಾಡಲು ಸೂಚಿಸಿದೆ.

ವಿದ್ಯಾರ್ಥಿಗಳಲ್ಲಿ ಶೀತ, ಜ್ವರ, ಕೆಮ್ಮು ಸೇರಿದಂತೆ ಇತರೆ ಕೊರೊನಾ ಸೊಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಅವರನ್ನು ಪರೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮಗುವನ್ನು ಮನೆಗೆ ಕಳುಹಿಸಿಕೊಡುವುದು, ಇಲ್ಲವೇ ಹೆಚ್ಚಿನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಶಿಕ್ಷಕರು, ಬೋದಕೇತರ ಸಿಬ್ಬಂದಿ ಕಡ್ಡಾಯವಾಗಿ ಕನಿಷ್ಠ ಮೊದಲ ಡೋಸ್ ಲಸಿಕೆಯಾದರೂ ಪಡೆದಿರಬೇಕು ಸೇರಿದಂತೆ ಇತರೆ ನಿಯಮಗಳನ್ನು ಮಾರ್ಗಸೂಚಿಯಲ್ಲಿ ಹೊರಡಿಸಲಾಗಿದ್ದು, ಅದರಂತೆ ಎಲ್ಲಾ ಶಾಲೆಗಳಲ್ಲೂ ತರಗತಿಗಳು ಆರಂಭವಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಸಚಿವ ಡಾ.ಕೆ.ಸುಧಾಕರ್ ಅವರಿಗೆ ರಾಖಿ ಕಟ್ಟುವ ಮೂಲಕ ಸಹೋದರತ್ವ ಮೆರೆದರು. ಗಾಯಕ ಮಹಾಲಿಂಗಯ್ಯ ಮಠದ್ ಅವರ ಗಾಯನ ತಂಡವು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ,  ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

ಜಿಲ್ಲೆಗೆ 15 ವರ್ಷ, ಸಚಿವರ ಹರ್ಷ: ಚಿಕ್ಕಬಳ್ಳಾಪುರ ಜಿಲ್ಲೆಯು ನೂತನ ಜಿಲ್ಲೆಯಾಗಿ ಉದಯಿಸಿ ಇಂದಿಗೆ 15 ವರ್ಷಕ್ಕೆ ಕಾಲಿಟ್ಟಿದೆ. ಈ 15 ವರ್ಷಗಳಲ್ಲಿ ಜಿಲ್ಲೆಯು ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರ ಕ್ರಮಿಸಿದೆ. ಅದರಲ್ಲೂ ಕಳೆದ 7-8 ವರ್ಷಗಳಲ್ಲಿ ಅಭಿವೃದ್ಧಿಯ ವೇಗ ಹೆಚ್ಚಾಗಿದೆ. ಈ ಹಿಂದೆ ಬರದ ನಾಡು ಎಂದು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯಲ್ಲಿ ಈಗ ಕೆರೆಗಳಲ್ಲಿ ನೀರು ತುಂಬಿಕೊಂಡಿರುವಂತಹ ರಮಣೀಯ ದೃಶ್ಯಗಳು ಕಾಣುತ್ತಿವೆ.

ದಶಕಗಳ ಕನಸಾದ ಸುಮಾರು 600 ಕೋಟಿ ರುಪಾಯಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ಬರದಿಂದ ಸಾಗುತ್ತಿದೆ. ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರದಲ್ಲಿ ಉತ್ತಮ ದಾಪುಗಾಲು ಹಾಕುತ್ತಿದೆ. ಇದಕ್ಕೆಲ್ಲಾ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಡಳಿತ, ಅಧಿಕಾರಿಗಳು ಹಾಗೂ ಜಿಲ್ಲೆಯ ಜನತೆಯ ಸಹಕಾರವೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!